ಬೆಂಗಳೂರು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿದ್ದು ಇದೀಗ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿಯು ಚುನಾವಣಾ ಸಿದ್ದತಾ ಕಾರ್ಯಾಗಾರ ಹಮ್ಮಿಕೊಂಡಿದ್ದು, ಈ ಕಾರ್ಯಗಾರದಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿರುವ ರಾಧಾ ಮೋಹನ್ ದಾಸ್ ಅಗರ್ವಾಲ್ ಕಾರ್ಯಕರ್ತರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಗಮನಿಸಿ : ಮತದಾರರ ಪಟ್ಟಿಯಲ್ಲಿ `ಹೆಸರು’ ಸೇರ್ಪಡೆಗೆ ಮಾ.25 ಲಾಸ್ಟ್ ಡೇಟ್
ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ರಾಧಾ ಮೋಹನ್ದಾಸ್ ಅಗರ್ವಾಲ್ ಅವರು, ಕಾರ್ಯಕರ್ತರಿಗೆ ಅಗರ್ವಾಲ್ ಕಿವಿಮಾತು ಹೇಳಿದ್ದು, ನಮ್ಮೊಳಗಿನ ಮಾತು ಬಂದ್ ಆಗಬೇಕು. ಯಾವುದೇ ರೀತಿಯಾದ ಆಂತರಿಕ ಚರ್ಚೆ ಆಗಬಾರದೆಂದು ಇದೇ ವೇಳೆ ಖಡಕ್ ಸೂಚನೆ ನೀಡಿದ್ದಾರೆ.
ಹಾಸನ ಡಿಸಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ HD ದೇವೇಗೌಡ : ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ
ಹಾಸನ ಮಂಡ್ಯ ಕೋಲಾರದಲ್ಲೂ ಕೂಡ ನಾವು ಕೆಲಸ ಮಾಡಬೇಕು. ಜೆಡಿಎಸ್ ಜೊತೆಗೆ ಸೇರಿಕೊಂಡು ಕೆಲಸ ಮಾಡಬೇಕು.ಅಭ್ಯರ್ಥಿ ಯಾರೇ ಆದರೂ ಕೂಡ ಅವರ ಪರವಾಗಿ ನಾವು ಕೆಲಸ ಮಾಡಬೇಕು.ಜೆಡಿಎಸ್ ಅಭ್ಯರ್ಥಿಗಳ ಪರವೂ ಕೂಡ ಕೆಲಸ ಮಾಡಬೇಕು ಎಂದು ರಾಧಾ ಮೋಹನ್ ದಾಸ್ ಅಗರ್ವಾಲ್ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Alert : ʻಸುಕನ್ಯಾ ಸಮೃದ್ಧಿ ಯೋಜನೆʼ : ಮಾ.31 ರೊಳಗೆ ಈ ಕೆಲಸ ಮಾಡದಿದ್ದರೆ `ಬಂದ್’ ಆಗಲಿದೆ ನಿಮ್ಮ ಖಾತೆ!
ಈ ಒಂದು ರಾಜ್ಯ ಬಿಜೆಪಿ ಚುನಾವಣಾ ಸಿದ್ದತಾ ಕಾರ್ಯಗಾರವು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದು, ಕಾರ್ಯಗಾರದಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ಬೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಶಾಸಕ ವಿ ಸುನಿಲ್ ಕುಮಾರ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಸೇರಿದಂತೆ ಪ್ರಮುಖ ನಾಯಕರು ಕೂಡ ಭಾಗಿಯಾಗಿದ್ದಾರೆ.