Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸುಪ್ರೀಂ ಕೋರ್ಟ್‌ನಲ್ಲಿ ನೂತನ ನ್ಯಾಯಾಧೀಶರ ನೇಮಕ: ಐವರು ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರದ ಅಸ್ತು

ಸತತ 2ನೇ ಕಪ್ ಗೆದ್ದ ಖುಷಿಯಲ್ಲಿ, ಪತ್ನಿ ಅನುಷ್ಕಾ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ ವಿರಾಟ್ ಕೊಹ್ಲಿ | Video Viral

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಾವಣಗೆರೆಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಶ್ಯಾಮನೂರು ಶಿವಶಂಕರಪ್ಪ ಕಾರಣ : ಸಿಎಂ ಸಿದ್ದರಾಮಯ್ಯ
KARNATAKA

ದಾವಣಗೆರೆಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಶ್ಯಾಮನೂರು ಶಿವಶಂಕರಪ್ಪ ಕಾರಣ : ಸಿಎಂ ಸಿದ್ದರಾಮಯ್ಯ

By ಸುರೇಶ್‌

ಬೆಳಗಾವಿ, ಡಿಸೆಂಬರ್ 14: ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದು ಮಂಡಿಸಲಾದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿ ಅವರು ಮಾತನಾಡಿದರು.

ಶ್ಯಾಮನೂರು ಶಿವಶಂಕರಪ್ಪ ಅವರು ತಮ್ಮ 63 ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಲಾ ರಾಜಕೀಯದಲ್ಲಿದ್ದರು ಎಂದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಎಂದರು.

ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಖಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ ಎಂದರು.

ದಾವಣಗೆರೆಗೆ ಬ್ರಾಂಡ್ ಹೆಸರು ಕೊಟ್ಟರು ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶ್ಯಾಮನೂರರು ತಂದುಕೊಟ್ಟರು. ದೀರ್ಘಕಾಲ ಎಐಸಿಸಿ ಖಜಾಂಚಿ ಆಗಿದ್ದರು. ಎಲ್ಲರೊಂದಿಗೂ ಸ್ನೇಹ ಸಂಪಾದಿಸಿದ್ದವರು ಅಜಾತಶತ್ರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ದಾವಣಗೆರೆಗೆ ಭೇಟಿ ನೀಡಿದಾಗಲೆಲ್ಲ ಅವರ ಗೆಸ್ಟ್ ಹೌಸ್ ನಲ್ಲಿ ಉಳಿಯುತ್ತಿದ್ದು, ಅವರ ಒತ್ತಾಯದ ಮೇರೆಗೆ ಅವರ ಮನೆಯಲ್ಲಿಯೇ ಊಟ ಮಾಡುತ್ತಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ತಮ್ಮ 75ನೇ ಜನ್ಮದಿನವನ್ನು ದಾವಣಗೆರೆಯಲ್ಲಿಯೇ ಆಚರಿಸಿಕೊಂಡಿದ್ದನ್ನು ಅವರು ಇದೇ ಸಂದರ್ಭದಲ್ಲಿ ನೆನಪಿಸಿಕೊಂಡರು.

ನೆರವಿನಹಸ್ತ ಚಾಚುತ್ತಿದ್ದರು ಶ್ಯಾಮನೂರು ಶಿವಶಂಕರಪ್ಪ ಕಷ್ಟದ ಸಂದರ್ಭಗಳಲ್ಲಿ ಜನರಿಗೆ ಸಹಾಯಹಸ್ತ ಚಾಚುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆರು ಕೋಟಿಗೂ ಹೆಚ್ಚು ವೆಚ್ಚ ಮಾಡಿ ಆಕ್ಸಿಜನ್ ಸರಬರಾಜು ಮಾಡಿದ್ದರು ಎಂದರು.

ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಮಂತ್ರಿ ಮಂಡಲದಲ್ಲಿ ಶ್ಯಾಮನೂರು ಶಿವಶಂಕರಪ್ಪ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು 2016ರಲ್ಲಿ ಸಂಪುಟ ಪುನರ್ ರಚನೆಯಾದಾಗ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನು ಸಚಿವರನ್ನಾಗಿ ಮಾಡಲು ಕೋರಿಕೊಂಡಿದ್ದರು. ಮಲ್ಲಿಕಾರ್ಜುನ್ ಅವರು ನಮ್ಮ ಈಗಿನ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

15 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿದಾಗ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ನಿಧನದಿಂದ ಜನಪರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ದೊಡ್ಡ ಕುಟುಂಬ ಹಾಗೂ ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದು ಭಗವಂತ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಸಂತಾಪದಲ್ಲಿ ತಿಳಿಸಿದರು.

Share. Facebook Twitter LinkedIn WhatsApp Email

Related Posts

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

2 Mins Read

Rain Alert : ಇಂದು ಬೆಂಗಳೂರಲ್ಲಿ ಭಾರಿ ಮಳೆ : ಈ 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

1 Min Read

BIG NEWS : ಮತ್ತೆ ಘರ್ಜಿಸಿದ RCB ಸಿಂಹಗಳು : ಟ್ವೀಟ್ ನಲ್ಲಿ ವಿಜಯ್ ಮಲ್ಯ ಅಭಿನಂದನೆ

1 Min Read
Recent News

ಸುಪ್ರೀಂ ಕೋರ್ಟ್‌ನಲ್ಲಿ ನೂತನ ನ್ಯಾಯಾಧೀಶರ ನೇಮಕ: ಐವರು ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರದ ಅಸ್ತು

ಸತತ 2ನೇ ಕಪ್ ಗೆದ್ದ ಖುಷಿಯಲ್ಲಿ, ಪತ್ನಿ ಅನುಷ್ಕಾ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ ವಿರಾಟ್ ಕೊಹ್ಲಿ | Video Viral

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

Indian Air Force

ದೇಶದ 244 ಜಿಲ್ಲೆಗಳಲ್ಲಿ ವಾಯುದಾಳಿ ಎಚ್ಚರಿಕೆ ವ್ಯವಸ್ಥೆ: ವಾಯುಪಡೆಯ ನೆರವು ಪಡೆಯಲಿದೆ ಕೇಂದ್ರ ಸರ್ಕಾರ

State News
KARNATAKA

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

By ಸುರೇಶ್‌ KARNATAKA 2 Mins Read

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಕೊನೆಗೂ ಅದ್ಭುತ ಪ್ರತಿಫಲ ಸಿಕ್ಕಿದೆ. ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ…

Rain Alert : ಇಂದು ಬೆಂಗಳೂರಲ್ಲಿ ಭಾರಿ ಮಳೆ : ಈ 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

BIG NEWS : ಮತ್ತೆ ಘರ್ಜಿಸಿದ RCB ಸಿಂಹಗಳು : ಟ್ವೀಟ್ ನಲ್ಲಿ ವಿಜಯ್ ಮಲ್ಯ ಅಭಿನಂದನೆ

ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಪ್ರಕರಣ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.