ಬೆಂಗಳೂರು: ಸಿದ್ದಗಂಗಾ ಮಠದಿಂದ ಬಿಸಿಎಂ ಹಾಸ್ಟೆಲ್ಗಳಿಗೆ ಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ ದಯಾನಂದರಿಂದ ಅಮಾನತು ಮಾಡಿ ಆದೇಶ ಹೊಡಿಸಿದ್ದಾರೆ.
ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಕಡ್ಡಾಯವಲ್ಲ: ರಾಜ್ಯ ಸರ್ಕಾರದಿಂದ ಮತ್ತೊಂದು ‘ವಿವಾದತ್ಮಕ’ ಆದೇಶ!
BREAKING: ‘KCET’ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ, ಇಲ್ಲಿದೆ ನೂತನ ‘ದಿನಾಂಕ’ |KCET 2024
ತುಮಕೂರು ಜಿಲ್ಲೆಯ ಬಿಸಿಎಂ ಹಾಸ್ಟೆಲ್ಗಳಿಗೆ ಕರ್ನಾಟಕ ಸರ್ಕಾರದಿಂದ ಅಕ್ಕಿ ಪೂರೈಕೆಯಾಗಿಲ್ಲ. ಹೀಗಾಗಿ ಜಿಲ್ಲೆಯ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ಸಾಲದ ರೂಪದಲ್ಲಿ ಹಾಸ್ಟೆಲ್ಗಳು ಪಡೆದಿವೆ ಎನ್ನುವ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಸಾರದವಾದ ಬೆನ್ನಲೇ ಈ ಆದೇಶವನ್ನು ಇಲಾಖೆ ಮಾಡಿದೆ. ಅಧಿಕಾರಿಗಳು ಸುಮಾರು 80 ಚೀಲ ಅಕ್ಕಿ ಸಾಲ ಪಡೆದಿದ್ದಾರೆ. ಆ ಮೂಲಕ ಸಾಲದ ಅಕ್ಕಿಯಿಂದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಊಟಕ್ಕೆ ನೀಡಲಾಗಿತ್ತು ಎನ್ನಲಾಗಿದೆ.