ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು ನಡೆದಂತ ಭೀಕರ ಕಾರು ಅಪಘಾತದಲ್ಲಿ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಅವರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸ್ಥಿತಿ ಚಿಂತಾಜನಕ ಎಂಬುದಾಗಿ ಹೇಳಲಾಗುತ್ತಿದೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳ ಮಠದ ಶಿವಕುಮಾರಸ್ವಾಮೀಜಿ ಅವರ ಕಾರು, ಅಮಿನಗಢ ಬಳಿಯಲ್ಲಿ ಇಂದು ಟಿಪ್ಪರ್ ವಾಹನಕ್ಕೆ ಡಿಕ್ಕಿಯಾದ ಪರಿಣಾಮ, ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಶಿವಕುಮಾರಸ್ವಾಮೀಜಿಯವರ ತಲೆಗೆ ಗಂಭೀರವಾಗಿ ಪೆಟ್ಟುಬಿದ್ದಿದ್ದು, ಕೋಮಾದಲ್ಲಿ ಇದ್ದಾರೆ ಎನ್ನಲಾಗುತ್ತಿದೆ.

ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವಂತ ಸಿದ್ಧನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿಯವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಶಿವಕುಮಾರಸ್ವಾಮೀಜಿಯವರ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ರಾಜ್ಯದ ಶಿಕ್ಷಕರು, ಪದವೀಧರರೇ ಗಮನಿಸಿ: ಮೇ.6ರವರೆಗೆ ‘ಮತದಾರರ ನೋಂದಣಿ’ಗಾಗಿ ಅರ್ಜಿ ಸಲ್ಲಿಕೆಗೆ ಅವಕಾಶ

ಪ್ರಜ್ವಲ್ ರೇವಣ್ಣರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ : ರಾಹುಲ್ ಗಾಂಧಿ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ

Share.
Exit mobile version