ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ A1, ಬಿ.ನಾಗೇಂದ್ರ A2, ನಿಗಮದ ಅಧ್ಯಕ್ಷ A3 ಆರೋಪಿಗಳಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರವಾದ ಆರೋಪ ಮಾಡಿದರು.
ಇಂದು ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಬಿ.ನಾಗೇಂದ್ರ ಇಲ್ಲ. ಇದರ ಹಿಂದೆ ದೊಡ್ಡ ನಾಯಕರೇ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗೊತ್ತಿದ್ದೇ ಈ ಹಗರಣ ನಡೆದಿದೆ. ಇದರ ಜೊತೆ ಇನ್ನಷ್ಟು ಸಚಿವರೂ ಸೇರಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯನವರಿಗೆ ಆರ್ಥಿಕತೆಯ ಬಗ್ಗೆ ಗೊತ್ತಿದೆಯೇ? ಇಲಾಖೆಯ ಮೇಲೆ ಇವರಿಗೆ ಹಿಡಿತವಿಲ್ಲವೇ? ಈ ಹಣ ಹೈದರಾಬಾದ್‌ಗೆ ಹೋಗಿದ್ದು ತಿಳಿದರೂ ಬೇರೆಯವರ ವಿರುದ್ಧ ಕಠಿಣ ಕ್ರಮ ವಹಿಸಿಲ್ಲ. ದಲಿತರ ಹಣವನ್ನು ವಾಪಸ್ ಮಾಡದಿದ್ದರೆ ಜನರ ಶಾಪ ತಟ್ಟಲಿದೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿಯೇ ಮೊದಲ ಆರೋಪಿಯಾಗಿದ್ದು, ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ಕಸದ ಮೇಲೂ ತೆರಿಗೆಗೆ ಕಿಡಿ ಕಾರಿದ ಆರ್.ಅಶೋಕ್
ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿಯು ಈಗಾಗಲೇ ದೇಶದ ಇತರೆ ರಾಜ್ಯಗಳ ಘನತ್ಯಾಜ್ಯ ಶುಲ್ಕದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಾಗೂ ಕಡಿಮೆ ಹಣ ವಸೂಲಿಗೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. ಸರ್ಕಾರ ಇದಕ್ಕೆ ಒಪ್ಪಿದರೆ ಆದಷ್ಟು ಬೇಗ ಬೆಂಗಳೂರಿನಲ್ಲಿ ಪ್ರತಿಯೊಂದು ಮನೆಯಿಂದ 100ರೂ ಘನತ್ಯಾಜ್ಯ ಶುಲ್ಕ ಸಂಗ್ರಹಿಸಲಾಗುತ್ತೆ.
ರಾಜ್ಯ ಸರ್ಕಾರದ ಈ ಗ್ರಾಮವನ್ನು ಖಂಡಿಸಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯನ್ನು ಮಾಡಿಲ್ಲ. ಹೀಗಾಗಿ ಸಚಿವರು ಕೈ ಶಾಸಕರ ಕ್ಷೇತ್ರಗಳಲ್ಲಿ ಬಿಜೆಪಿಗೆ ಲೀಡ್ ಕೊಟ್ಟಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು.
ಈಗಾಗಲೇ ಹಾಲು, ಲಿಕ್ಕರ್, ವಿದ್ಯುತ್, ಮನೆ ತೆರಿಗೆ ಹೆಚ್ಚಳವಾಗಿದೆ. ಈಗ ಘನ ತ್ಯಾಜ್ಯಕ್ಕೆ ತೆರಿಗೆ ಹಾಕಲು ಸರ್ಕಾರ ಮುಂದಾಗಿದೆ. ಕಸದ ಮೇಲೆ ತೆರಿಗೆ ವಿಧಿಸುವುದನ್ನು ಬಿಜೆಪಿ ವಿರೋಧಿಸುತ್ತದೆ.ಸರ್ಕಾರ ಕಸಕ್ಕೆ ತೆರಿಗೆ ವಿಧಿಸಿದರೆ ಬಿಜೆಪಿ ಹೋರಾಟ ಮಾಡುತ್ತದೆ.ಕಸದ ಮೇಲು ತೆರಿಗೆ ಹಾಕಿದ್ದಾರೆಂದರೆ ಸರ್ಕಾರ ಪಾಪರಾಗಿದೆ ರಾಜ್ಯ ಕಾಂಗ್ರೆಸ್ ಸಂಪೂರ್ಣ ದಿವಾಳಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.