ನವದೆಹಲಿ: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅತ್ಯುನ್ನತ ಜವಾಬ್ದಾರಿಯೊಂದನ್ನು ನೀಡಿದೆ. ಕಾಂಗ್ರೆಸ್ ಪಕ್ಷದ ಪರಮೋಚ್ಛ ನಿರ್ಧಾರ ಕೈಗೊಳ್ಳುವ ಅಂಗವಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC – Congress Working Committee) ಸದಸ್ಯರನ್ನಾಗಿ ಸಿದ್ದರಾಮಯ್ಯ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಜೂನ್ 2, 2026 ರಂದು ನವದೆಹಲಿಯ ಅಕ್ಬರ್ ರಸ್ತೆಯ ಕಾಂಗ್ರೆಸ್ ಪ್ರಧಾನ ಕಚೇರಿಯಿಂದ ಈ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಗೌರವಾನ್ವಿತ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಈ ಪ್ರಮುಖ ನೇಮಕಾತಿ ನಡೆದಿದೆ.
ರಾಜ್ಯದಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಭರದಿಂದ ಸಾಗುತ್ತಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ಮಟ್ಟದ ಉನ್ನತ ಸಮಿತಿಯಲ್ಲಿ ಸ್ಥಾನ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.









