ಬೆಂಗಳೂರು: ಮಹಿಳಾ ಸ್ವಸಹಾಯ ಸಂಘಗಳಿಂದ ಇಂದಿರಾ ಕ್ಯಾಂಟೀನ್ ಆರಂಭಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಕೌಶಲ್ಯ, ಉದ್ಯೋಗ ಮತ್ತು ಜೀವನೋಪಾಯ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು
ಅಕ್ಕ ಕೆಫೆಗಳ ಮಾದರಿಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಅಕ್ಕ ಕೆಫೆಗಳನ್ನು 2024-25ರ ಬಜೆಟ್ನಲ್ಲಿ ಘೋಷಿಸಲಾಗಿದ್ದು, ಇದರ ಅಡಿಯಲ್ಲಿ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಕೆಫೆಗಳನ್ನು ನಡೆಸುವ ಬಗ್ಗೆ ತರಬೇತಿ ನೀಡಲಾಗುವುದು. ಕೆಫೆಗಳ ಕಾರ್ಯನಿರ್ವಹಣೆಯ ಬಗ್ಗೆ ಅಧಿಕಾರಿಗಳು ಸಲ್ಲಿಸಿದ ವಿವರಗಳಿಂದ ಪ್ರಭಾವಿತರಾದ ಮುಖ್ಯಮಂತ್ರಿಗಳು, ಇಂದಿರಾ ಕ್ಯಾಂಟೀನ್ ಗಳಿಗೆ ಇದೇ ಮಾದರಿಯನ್ನು ಜಾರಿಗೆ ತರುವ ಬಗ್ಗೆ ಅಭಿಪ್ರಾಯ ಕೇಳಿದರು ಮತ್ತು ಈ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಏತನ್ಮಧ್ಯೆ, ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿಯ ಮಹತ್ವವನ್ನು ಒತ್ತಿ ಹೇಳಿದ ಸಿದ್ದರಾಮಯ್ಯ, ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) ದಾಖಲಾತಿಯನ್ನು ಸುಧಾರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಜೆಟ್ ನಲ್ಲಿ ಘೋಷಿಸಿದ ಐಟಿಐ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಸಂವಹನ ತರಬೇತಿಯನ್ನು ಪೂರ್ಣಗೊಳಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅರ್ಹ ಪದವೀಧರರನ್ನು ನೋಂದಾಯಿಸಲು ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು