ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಪ್ರಕರಣದಲ್ಲಿ ಸಿದ್ದರಾಮಯ್ಯ ಸಂಪುಟದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಇಂದು ರಾಜೀನಾಮೆ ನೀಡಿದ್ದಾರೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ ಬಿ.ನಾಗೇಂದ್ರ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಬಿ.ನಾಗೇಂದ್ರ ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ ಕೇವಲ ಒಂದೇ ಒಂದು ಸಾಲಿನಲ್ಲಿ ರಾಜೀನಾಮೆ ನೀಡಲಾಗಿದೆ. ಅವರು ನಾನು ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.
ಬಿ.ನಾಗೇಂದ್ರ ನೀಡಿದಂತ ರಾಜೀನಾಮೆಯನ್ನು ಸಿಎಂ ಸಿದ್ಧರಾಮಯ್ಯ ಪಡೆದರು. ಈ ಮೂಲಕ ಸಿದ್ದರಾಮಯ್ಯ ಸಂಪುಟದ ಮೊದಲ ವಿಕೆಟ್ ಪತನವಾದಂತೆ ಆಗಿದೆ.
ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಪಸ್ಥಿತರಾಗಿದ್ದರು.
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ: ಎಂ.ಕೆ ವಿಶಾಲಾಕ್ಷಿ ಮಾಹಿತಿ
CISF ಮಹಿಳಾ ಪೇದೆ ‘ನಟಿ ಕಂಗನಾ ರಣಾವತ್’ಗೆ ‘ಕಪಾಳಮೋಕ್ಷ’ ಮಾಡಿದ್ದು ಯಾಕೆ ಗಾತ್ತಾ? | Kangana Ranaut Slapped