ಬೆಂಗಳೂರು: ಕೊಳವೆ ಬಾವಿಗೆ ಬಿದ್ದಿದ್ದಂತ ಸಾತ್ವಿಕ್ ನನ್ನು ರಕ್ಷಣಾ ಸಿಬ್ಬಂದಿಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಈ ರಕ್ಷಣಾ ತಂಡಕ್ಕೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಅಲ್ಲದೇ ರಾಜ್ಯದ ಜನತೆಗೆ ಮಹತ್ವದ ಸಲಹೆ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ.
ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ ಎಂದಿದ್ದಾರೆ.
ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದು ಹೇಳಿದ್ದಾರೆ.
ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ.
ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ -…
— Siddaramaiah (@siddaramaiah) April 4, 2024
ಭಾರತೀಯ ಪ್ರವಾಸಿಗರಿಗೆ ಜಪಾನ್ ‘ಇ-ವೀಸಾ’ ಆರಂಭ ; ಅರ್ಜಿ ಸಲ್ಲಿಸುವುದು ಹೇಗೆ.?
IPL 2024 : ಡೆಲ್ಲಿ ಕ್ಯಾಪಿಟಲ್ಸ್ ನಾಯಕ ‘ರಿಷಭ್ ಪಂತ್’ಗೆ 24 ಲಕ್ಷ ರೂಪಾಯಿ ದಂಡ