ಬೆಳಗಾವಿ : ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನ ರದ್ದು ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕೋವಿಡ್ ಬಗ್ಗೆ ಪ್ರಸ್ತಾಪ ಮಾಡಿದ ಸಿದ್ದರಾಮಯ್ಯ ಸರ್ಕಾರ ಈ ಕೂಡಲೇ ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನ ರದ್ದು ಮಾಡಬೇಕು, ಕಡ್ಡಾಯವಾಗಿ ಬೂಸ್ಟರ್ ಡೋಸ್ ನೀಡಿ ಎಂದು ಆಗ್ರಹಿಸಿದರು
ಸರ್ಕಾರ ಈ ಬಗ್ಗೆ ಮುಂಜಾಗೃತಾ ಕ್ರಮ ಕೈಗೊಂಡು ಕೇಂದ್ರ ಸರ್ಕಾರದ ಜೊತೆ ಚರ್ಚಿಸಿ ವಿಮಾನಯಾನ ರದ್ದು ಮಾಡಬೇಕು ಎಂದು ಆಗ್ರಹಿಸಿದರು.ಕೊವಿಡ್ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಇದೆ. ಯಾವೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂದು ಚರ್ಚೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್ ಸಿದ್ದು ಮಾತಿಗೆ ಪ್ರತಿಕ್ರಿಯೆ ನೀಡಿದರು.
BIGG NEWS : ಕೊರೊನಾ ಪ್ರಮಾಣ ಹೆಚ್ಚಳ ವಿಚಾರ ಗಂಭೀರವಾಗಿ ಪರಿಗಣಿಸಿದ್ದೇವೆ : ಸಿಎಂ ಬೊಮ್ಮಾಯಿ