Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ

24/02/2026 6:46 PM

ನಿಮ್ಮ ಮನೆಯ ವಾಸ್ತು ಸಮಸ್ಯೆ ಸರಿ ಪಡಿಸೋದಕ್ಕೆ ಜಸ್ಟ್ ಹೀಗೆ ಮಾಡಿ ಸಾಕು

24/02/2026 6:46 PM

‘ಸಾಗರ ACF’ ಅವಾಚ್ಯ ಶಬ್ದಗಳಿಂದ ‘ಜಾತಿ ನಿಂದನೆ’: ರೈತನಿಂದ ‘DFO’ಗೆ ದೂರು

24/02/2026 6:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಗೃಹಲಕ್ಷ್ಮೀ ಯೋಜನೆ’ ಬಗ್ಗೆ ಸುಳ್ಳು ಜಾಹೀರಾತು: ‘ಮೋದಿ’ ಕ್ಷಮೆಯಾಚನೆಗೆ ‘ಸಿಎಂ ಸಿದ್ದರಾಮಯ್ಯ’ ಒತ್ತಾಯ
KARNATAKA

‘ಗೃಹಲಕ್ಷ್ಮೀ ಯೋಜನೆ’ ಬಗ್ಗೆ ಸುಳ್ಳು ಜಾಹೀರಾತು: ‘ಮೋದಿ’ ಕ್ಷಮೆಯಾಚನೆಗೆ ‘ಸಿಎಂ ಸಿದ್ದರಾಮಯ್ಯ’ ಒತ್ತಾಯ

By kannadanewsnow0907/11/2024 4:18 PM

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಜಾಹೀರಾತು ನೀಡಿದ್ದಾರೆ. ಕೂಡಲೇ ಕ್ಷಮೆಯಾಚನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ‘‘ಸುಳ್ಳೇ ಬಿಜೆಪಿಯ ಮನೆ ದೇವರು’’ ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆಯಾಗಿರುವ ‘’ಗೃಹಲಕ್ಷ್ಮಿ’’ ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ ಪ್ರಕಟಿಸಿ ಸಿಕ್ಕಿ ಹಾಕಿಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದಂತೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರದೆ ಮೋಸ ಮಾಡಿದೆ ಎನ್ನುವುದು ಬಿಜೆಪಿ ಆರೋಪ ಎಂದಿದ್ದಾರೆ.

ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಇದೇನು ನಮಗೆ ಆಶ್ಚರ್ಯ ಉಂಟುಮಾಡಿಲ್ಲ. ಮನೆ ಒಡೆಯನ ಬುದ್ದಿ ಮನೆಯವರಿಗೆಲ್ಲ ಬಂದಿದೆ. ಹೋದಲ್ಲಿ ಬಂದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳುಗಳನ್ನು ಉದುರಿಸುವ ನಿಮ್ಮಿಂದಲೇ ಪ್ರೇರಣೆ ಪಡೆದು ಮಹಾರಾಷ್ಟ್ರ ಬಿಜೆಪಿ ಇಷ್ಟೊಂದು ನಿರ್ಲಜ್ಜತನದಿಂದ ಈ ಹಸಿಸುಳ್ಳನ್ನು ಪ್ರಕಟಿಸಿದೆ ಎನ್ನುವುದು ನಿಸ್ಸಂಶಯ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ 2023ರ ಆಗಸ್ಟ್ ತಿಂಗಳಿನಿಂದ ಈ ವರೆಗೆ 1.22 ಕೋಟಿ ಮನೆಯೊಡತಿಯರ ಬ್ಯಾಂಕ್ ಖಾತೆಗೆ ಪ್ರತಿತಿಂಗಳು 2,000 ರೂಪಾಯಿ ಸಂದಾಯವಾಗುತ್ತಿದೆ. ಈ ರೀತಿ ಒಟ್ಟು ₹30,285 ಕೋಟಿ ವರ್ಗಾವಣೆ ಮಾಡಲಾಗಿದೆ. ಅನುಮಾನ ಇದ್ದವರು ಈ 1.22 ಕೋಟಿ ಮನೆ ಒಡತಿಯರನ್ನೇ ಕೇಳಿ ಪರಾಂಬರಿಸಿಕೊಳ್ಳಿ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರೇ, ಇದು ನಿಮ್ಮ ಸುಳ್ಳಿನಿಂದಲೇ ಪ್ರೇರಣೆ ಪಡೆದು ಹೇಳಿರುವ ಸುಳ್ಳಾಗಿರುವ ಕಾರಣ ದಯವಿಟ್ಟು ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಹೇಳಿರುವ ಸುಳ್ಳಿಗಾಗಿ ದೇಶದ ಜನತೆಯ ಕ್ಷಮೆ ಯಾಚಿಸಿ, ಸತ್ಯಸಂಗತಿಯನ್ನು ಸಾರ್ವಜನಿಕರಿಗೆ ತಿಳಿಸಬೇಕೆಂದು ಎಂದು ಆಗ್ರಹಿಸಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ತಾನು ಪ್ರಕಟಿಸಿರುವ ಸುಳ್ಳಿನ ಜಾಹೀರಾತಿನಷ್ಟೇ ಗಾತ್ರದ ಜಾಹೀರಾತಿನಲ್ಲಿ ಸತ್ಯ ಸಂಗತಿಯನ್ನು ತಿಳಿಸಿ ಅಲ್ಲಿನ ಎಲ್ಲ ಮಾಧ್ಯಮಗಳಲ್ಲಿ ಪ್ರಕಟಿಸುವಂತೆ ನೋಡಿಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ ನಮ್ಮ ಸರ್ಕಾರ ಮುಂದಿನ ಕ್ರಮದ ಬಗ್ಗೆ ಯೋಚನೆ ಮಾಡಲಿದೆ ಎಂದಿದ್ದಾರೆ.

BIG ENWS: ‘ಗೃಹ ಸಚಿವ ಡಾ.ಜಿ ಪರಮೇಶ್ವರ್’ ಸ್ವಕ್ಷೇತ್ರದಲ್ಲೇ ‘ಮಲ ಹೋರುವ ಪದ್ಧತಿ’ ಇನ್ನೂ ಜೀವಂತ

`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!

Share. Facebook Twitter LinkedIn WhatsApp Email

Related Posts

ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ

24/02/2026 6:46 PM2 Mins Read

ನಿಮ್ಮ ಮನೆಯ ವಾಸ್ತು ಸಮಸ್ಯೆ ಸರಿ ಪಡಿಸೋದಕ್ಕೆ ಜಸ್ಟ್ ಹೀಗೆ ಮಾಡಿ ಸಾಕು

24/02/2026 6:46 PM3 Mins Read

‘ಸಾಗರ ACF’ ಅವಾಚ್ಯ ಶಬ್ದಗಳಿಂದ ‘ಜಾತಿ ನಿಂದನೆ’: ರೈತನಿಂದ ‘DFO’ಗೆ ದೂರು

24/02/2026 6:30 PM3 Mins Read
Recent News

ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ

24/02/2026 6:46 PM

ನಿಮ್ಮ ಮನೆಯ ವಾಸ್ತು ಸಮಸ್ಯೆ ಸರಿ ಪಡಿಸೋದಕ್ಕೆ ಜಸ್ಟ್ ಹೀಗೆ ಮಾಡಿ ಸಾಕು

24/02/2026 6:46 PM

‘ಸಾಗರ ACF’ ಅವಾಚ್ಯ ಶಬ್ದಗಳಿಂದ ‘ಜಾತಿ ನಿಂದನೆ’: ರೈತನಿಂದ ‘DFO’ಗೆ ದೂರು

24/02/2026 6:30 PM

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ | Job Alert

24/02/2026 6:25 PM
State News
KARNATAKA

ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ

By kannadanewsnow0924/02/2026 6:46 PM KARNATAKA 2 Mins Read

ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ…

ನಿಮ್ಮ ಮನೆಯ ವಾಸ್ತು ಸಮಸ್ಯೆ ಸರಿ ಪಡಿಸೋದಕ್ಕೆ ಜಸ್ಟ್ ಹೀಗೆ ಮಾಡಿ ಸಾಕು

24/02/2026 6:46 PM

‘ಸಾಗರ ACF’ ಅವಾಚ್ಯ ಶಬ್ದಗಳಿಂದ ‘ಜಾತಿ ನಿಂದನೆ’: ರೈತನಿಂದ ‘DFO’ಗೆ ದೂರು

24/02/2026 6:30 PM

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ | Job Alert

24/02/2026 6:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.