ಮೈಸೂರು: ಕಾಂಗ್ರೆಸ್ ಪಕ್ಷದ ಘಟಾನುಘಟಿ ದಲಿತ ನಾಯಕರನ್ನು ಸಿದ್ದರಾಮಯ್ಯ ವ್ಯವಸ್ಥಿತವಾಗಿ ಮುಗಿಸಿದರು. ಮಲ್ಲಿಕಾರ್ಜುನ್ ಖರ್ಗೆ , ಶ್ರೀನಿವಾಸ ಪ್ರಸಾದ್, ಪರಮೇಶ್ವರ್ ಹೀಗೆ ಘಟಾನುಘಟಿ ನಾಯಕರನ್ನು ಸಿದ್ದರಾಮಯ್ಯ ರಾಜಕೀಯವಾಗಿ ಮುಗಿಸಿದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಬಿ. ಶ್ರೀರಾಮುಲು ಟೀಕಿಸಿದರು.
BIGG NEWS: KPCC ಯಲ್ಲಿ ಭಿನ್ನಮತ ಸ್ಫೋಟ; ಪುಷ್ಪಾ ಅಮರನಾಥ್ ಕೆಳಗಿಳಿಸುವಂತೆ ಆಗ್ರಹ
ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೀರ್ ಸಾಧಿಕ್ ರಾಜಕಾರಣಿ. ಹಿಂದುಳಿದ ವರ್ಗಗಳ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದರು ಎಸ್ಸಿ-ಎಸ್ಟಿ ಮೀಸಲಾತಿ ಅನುಷ್ಠಾನ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕ್ರೆಡಿಟ್ ವಾರ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೀಸಲಾತಿ ಹೆಚ್ಚಳ ಸಂಬಂಧ ಯಾರ ಕಾಲದಲ್ಲೋ ಸಮಿತಿ ರಚನೆ ಆಗಿರಬಹುದು. ಆದರೆ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ತಂದಿರುವುದು ನಮ್ಮ ಸರ್ಕಾರ. ಅವರಿಗೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿದೆ. ಹೀಗಾಗಿ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ತಂದಿರಲಿಲ್ಲ ಎಂದರು.