ಬೆಂಗಳೂರು : ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡಿಸುತ್ತಿದ್ದು 2024 25 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸಿತ್ತು. ಈ ಸಂದರ್ಭದಲ್ಲಿ ತೆರಿಗೆ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಡಿಸೈನ್ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದರು.

ಇದೀಗ ಲೋಕಸಭೆ ಚುನಾವಣೆಯ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಶತಾಯಗತಾಯ ಅತ್ಯಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಪ್ರಮುಖ ಗುರಿ ಹೊಂದಿದ್ದಾರೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಬಜೆಟ್ ನಲ್ಲಿ ಅತ್ಯಂತ ಮಹತ್ವದ ಘೋಷಣೆಗಳನ್ನು ಘೋಸಿಸುವ ಸಾಧ್ಯತೆ ಇದೇ ಎನ್ನಲಾಗಿದೆ. ಆದರೆ ಅದಕ್ಕೂ ಮುನ್ನ ಸರ್ಕಾರದ ಮುಂದೆ ಹಲವು ಸವಾಲುಗಳಿವೆ.

ಗ್ಯಾರಂಟಿ ಹೊರೆ-ಬರದ ಬರೆ

ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ದಾಟಿರಲಿಲ್ಲ. ಆದರೆ, ಈ ಬಾರಿ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್​ ಗಾತ್ರ 3.80 ಲಕ್ಷ ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಪಂಚ ಗ್ಯಾರಂಟಿ ಹೊರೆ ಹಾಗೂ ಬರದ ಬರೆ ಸರ್ಕಾರಕ್ಕೆ ಸವಾಲಾಗಿದೆ. ಪ್ರಸಕ್ತ ವರ್ಷದಲ್ಲಿ ರಾಜಸ್ವ ಸಂಗ್ರಹ ನಿಗದಿತ ಗುರಿ ತಲುಪದೇ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಸಮತೋಲನ ಕಾಯ್ದುಕೊಳ್ಳುವ ಅನಿವಾರ್ಯತೆ

2024-25 ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ ಸಮಾರು 58,000 ಕೋಟಿ ರೂ. ಅನುದಾನ ಮೀಸಲಿಡುವ ಅನಿವಾರ್ಯತೆ ಇದೆ. ಹೀಗಾಗಿ ಗ್ಯಾರಂಟಿ ವೆಚ್ಚದ ಮಧ್ಯೆ ಅಭಿವೃದ್ಧಿಗೆ ವೇಗ ಕೊಡುವ ಸಮತೋಲಿತ ಬಜೆಟ್ ಮಂಡಿಸಬೇಕಿದೆ. ಆದ್ರೂ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯದ ಜನತೆಗೆ ಒಂದಷ್ಟು ಬಂಪರ್ ಕೊಡುವೆ ಕೊಡುವ ನಿರೀಕ್ಷೆ ಹೊಂದಲಾಗಿದೆ.

ಇಂದು ಬಿಜೆಪಿ ನಿಲುವಳಿ ಸೂಚನೆ ಮಂಡನೆ ಸಾಧ್ಯತೆ

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಇಂದು ಇಡೀ ದಿನ ಚರ್ಚೆ ಮುಂದುವರಿಯಲಿದೆ. ಕಾನೂನು ಸುವ್ಯವಸ್ಥೆ ಬಗ್ಗೆ ಬಿಜೆಪಿ ನಿಡುವಳಿ ಸೂಚನೆ ನೀಡಿದೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಸರ್ಕಾರ ಉತ್ತರ ಕೊಡಲಿದೆ. ಬರಗಾಲ ಮತ್ತು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸರ್ಕಾರದ ಮೇಲೆ ಮಾಡಿರುವ 40% ಕಮಿಷನ್ ಆರೋಪದ ಬಗ್ಗೆ ಬಿಜೆಪಿ ನಿಲುವಳಿ ನೋಟಿಸ್ ಕೊಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

7ನೆ ವೇತನ ಆಯೋಗದ ವರದಿ ಜಾರಿ ಸಾಧ್ಯತೆ

ಹಳೆ ಮೈಸೂರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕ, ಮಧ್ಯಕರ್ನಾಟಕ ಹೀಗೆ ಪ್ರಾದೇಶಿಕವಾರು ನೀರಾವರಿ ಸೇರಿ ವಿವಿಧ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವ ನಿರೀಕ್ಷೆಯಿದೆ. ಇನ್ನು ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಜಾರಿಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ

ಟ್ವಿಟರ್​ನಲ್ಲಿ ‘ನನ್ನ ತೆರಿಗೆ ನನ್ನ ಹಕ್ಕು’ ಅಭಿಯಾನ ನಡೆಸಿದ ಸಿಎಂ ಸಿದ್ದರಾಮಯ್ಯ, ಅಭಿಯಾನ ಕುರಿತು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ನಾವು ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆ ಪರವಾಗಿರುವವರೆಂದು ಸಿಎಂ ಹೇಳಿದ್ದಾರೆ. ಮೋದಿ ಸರ್ಕಾರ ಕಾರ್ಪೊರೇಟ್ ಕಂಪನಿಗಳ ಮೇಲಿನ ತೆರಿಗೆ ಪ್ರಮಾಣ ಶೇ 22.5ಕ್ಕೆ ಇಳಿಸಿದೆ. ಆದ್ರೆ ಜನಸಾಮಾನ್ಯರ ಮೇಲೆ ತೆರಿಗೆ ಪ್ರಮಾಣ ಹೆಚ್ಚಳ ಮಾಡಿದೆ ಎಂದು ಕಿಡಿಕಾರಿದ್ದಾರೆ.

Share.
Exit mobile version