ಮೈಸೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 60% ಕಮಿಷನ್ ಸರ್ಕಾರ ಎಂದು ಶಾಸಕ ಜಿ.ಟಿ.ದೇವೇಗೌಡ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಹೆಸರಿಗೆ ಮಾತ್ರ ಶಾಸಕ, ಉಳಿದಂತೆ ಎಲ್ಲವೂ ನಿಮ್ಮದೇ ಅಧಿಕಾರ, ಕಾಂಗ್ರೆಸ್ ಸರ್ಕಾರ 60% ಕಮಿಷನ್ ಪಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಜಿ.ಟಿ. ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ನಮ್ಮ ಕ್ಷೇತ್ರದಲ್ಲಿ ಕಮಿಷನ್ ದಂಧೆ ಮಾಡುತ್ತಾರೆ. ಗುತ್ತಿಗೆದಾರರು ಸಿಎಂ ಪುತ್ರನಿಗೆ ಕಮಿಷನ್ ಕೊಡಬೇಕು. ಗುತ್ತಿಗೆದಾರರು 60% ಕಮಿಷನ್ ಕೇಳುತ್ತಾರೆ. ಕಾಂಗ್ರೆಸ್ ಸರ್ಕಾರ 60% ಕಮಿಷನ್ ಸರ್ಕಾರ ಎಂದು ಗಂಭೀರ ಆರೋಪ ಮಾಡಿದ್ದಾರೆ.