ಹಾವೇರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸಂಸದ ಗೋವಿಂದ ಕಾರಜೋಳ್ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಸಾಬೀತಾಗಿದೆ. ಶಿಕ್ಷೆ ಆಗೋದು ಫಿಕ್ಸ್ ಎಂದು ಭವಿಷ್ಯ ನುಡಿದರು.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರ ಉಳಿಯಲ್ಲ ಡಿಸೆಂಬರ್ 1ನೇ ತಾರೀಖಿನೊಳಗೆ ಸರ್ಕಾರ ಪತನ ಆಗಲಿದೆ ಎಂದು ಶಿಗ್ಗಾವಿಯಲ್ಲಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದರು. ಅವರ ಶಾಸಕರೇ ಸರ್ಕಾರ ಕೆಡವಲು ಸಜ್ಜಾಗಿದ್ದಾರೆ ಎಂದರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಆರೋಪ ಸಾಬೀತಾಗಿದೆ. ಶಿಕ್ಷೆ ಪ್ರಮಾಣವಷ್ಟೇ ನಿಗದಿಯಾಗಿಲ್ಲ ಶಿಕ್ಷೆ ವಿಳಂಬವಾಗಿರಬಹುದು ಆದರೆ ಶಿಕ್ಷೆ ಆಗೋದು ಫಿಕ್ಸ್ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ಎಲ್ಲರೂ ಮೋಸಗಾರರು ಎಂದು ಕಾಂಗ್ರೆಸ್ ವಿರುದ್ಧ ಗೋವಿಂದ ಕಾರಜೋಳ ಹರಿ ಹಾಯ್ದರು.







