ಬೆಂಗಳೂರು: ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಇಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಅರ್ಜಿ ಸಲ್ಲಿಕೆ ವೇಳೆ ತಿಳಿಯಲಿದೆ ಎಂದು ಹೇಳಲಾಗಿತ್ತು. ಆದ್ರೇ ಕೊನೆಗೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಸಿದ್ಧರಾಮಯ್ಯ, ತನ್ನ ಪರಮಾಪ್ತರ ಮೂಲಕ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಭರ್ಜರಿ ತಯಾರಿಯನ್ನು ನಡೆಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಪಕ್ಷದಿಂದ ಮುಂಬರುವಂತ ವಿಧಾನಸಭಾ ಚುನಾವಣೆಗೂ ಮುನ್ನವೇ ಟಿಕೆಟ್ ಸಲ್ಲಿಕೆಗೆ ಅರ್ಜಿಯನ್ನು ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿತ್ತು. ಅದರಂತೆ ಈಗಾಗಲೇ ಅನೇಕ ನಾಯಕರು ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ಇಂದು ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಈವರೆಗೆ ಯಾವ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪರ್ಧಿಸಲಿದ್ದಾರೆ ಎಂಬುದು ಬಿಸಿಬಿಸಿ ಚರ್ಚೆ ನಡೆಯುತ್ತಿತ್ತು. ಅದಕ್ಕೆ ಇಂದು ಸಿದ್ಧರಾಮಯ್ಯ ಸಲ್ಲಿಸಲಿರುವಂತ ಕಾಂಗ್ರೆಸ್ ಪಕ್ಷದ ಟಿಕೆಟ್ ಅರ್ಜಿಯಲ್ಲಿ ಹೊರಬೀಳಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ ತನ್ನ ಪರಮಾಪ್ತರ ಮೂಲಕ ಸಿದ್ಧರಾಮಯ್ಯ ಅರ್ಜಿಯನ್ನು ಸಲ್ಲಿಸಿದ್ದಾರೆ.
ಸಿದ್ಧರಾಮಯ್ಯ ಪರವಾಗಿ ಪ್ರಭಾಕರ್, ವೆಂಕಟೇಶ್ ಎಂಬುವರು ಕ್ಷೇತ್ರದ ಹೆಸರನ್ನು ಬರೆಯದೇ ಅರ್ಜಿಯನ್ನು ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಸಲ್ಲಿಸಿದ್ದಾರೆ. ಈ ಮೂಲಕ ಕೊನೆಗೂ ಯಾವ ಕ್ಷೇತ್ರದಿಂದ ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಿದ್ಧರಾಮಯ್ಯ ಸ್ಪರ್ಧಿಸಲಿದ್ದಾರೆ ಎಂಬುದು ಹೊರಬೀಳಲಿಲ್ಲ. ಆ ಬಗ್ಗೆ ಚುನಾವಣೆಯ ಹೊಸ್ತಿಲಿನವರೆಗೆ ಕಾದು ನೋಡಬೇಕಾಗಿದೆ.