ಬೆಂಗಳೂರು : ಮುಡಾ ಹಗರಣ ಸೇರಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತನಿಗೆ ಹಾಗೂ ಜಾರಿ ನಿರ್ದೇಶನಾಲಯ ತನಿಖೆಯಿಂದ ದೇವರ ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರ ಮಧ್ಯ ಸಿಎಂ ಸಂಘಕ್ಕೆ ರಾಜೀನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಲೇ ಇವೆ. ಟೀ ಕುರಿತಾಗಿ ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದರೆ ರಾಜ್ಯದಲ್ಲಿ ಕ್ರಾಂತಿ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕರ್ನಾಟಕ ರಾಜ್ಯೋತ್ಸವ ಸಮಿತಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಮಾತನಾಡಿದ ಅವರು,ಸ್ನೇಹ ಇದೆ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೊಗಳುತ್ತಿಲ್ಲ. 40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯಗೆ ಏನೂ ಸಿಕ್ಕಿಲ್ಲ. ಯಾರೇ ಬೀದಿಯಲ್ಲಿ ಹೋಗುವವರಿಬ್ಬರು ರಾಜ್ಯಪಾಲರಿಗೆ ದೂರು ಕೊಟ್ಟರು. ವಿರೋಧ ಪಕ್ಷದವರು ಎತ್ತಿಕಟ್ಟಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿಸಿದ್ದಾರೆ. ಸಿಎಂಗೆ ನೋಟಿಸ್ ಕೊಟ್ಟಿದ ದಿನವೇ ರಾಜ್ಯಪಾಲರ ವಿರುದ್ಧ ಮೊದಲು ಪ್ರತಿಭಟನೆ ಮಾಡಿದ್ದೇ ನಾನು ಎಂದಿದ್ದಾರೆ.