Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥರಾದ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ : ಆಸ್ಪತ್ರೆಗೆ ದಾಖಲು!

03/04/2026 4:41 PM

BREAKING: ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು

03/04/2026 4:41 PM

ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

03/04/2026 4:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಎಚ್.ಡಿ. ಕುಮಾರಸ್ವಾಮಿ ಕಿಡಿ
KARNATAKA

ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

By kannadanewsnow0903/04/2026 4:18 PM

ಮಂಡ್ಯ: “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಕ್ಕಳನ್ನು ರಾಜಕೀಯಕ್ಕೆ ತರುವ ಮೂಲಕ ತಾವೂ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ,” ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ತಾಲ್ಲೂಕಿನ ಟಿ.ಎಸ್. ಛತ್ರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ರಾಜಕಾರಣದ ಹಲವು ವಿಚಾರಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕುಟುಂಬ ರಾಜಕಾರಣದ ಬಗ್ಗೆ ಸಿದ್ದರಾಮಯ್ಯಗೆ ಟಾಂಗ್

ಸಿದ್ದರಾಮಯ್ಯ ಅವರ ಕುಟುಂಬ ರಾಜಕಾರಣದ ಟೀಕೆಗೆ ಉತ್ತರಿಸಿದ ಕುಮಾರಸ್ವಾಮಿ, “ಸಿದ್ದರಾಮಯ್ಯ ಅವರು ಮೊದಲು ತಮ್ಮ ಮೊದಲ ಮಗನನ್ನು ಬೆಳೆಸಲು ನೋಡಿದರು. ಅವರ ಅಕಾಲಿಕ ಮರಣದ ನಂತರ ಎರಡನೇ ಮಗನನ್ನು ರಾಜಕಾರಣಕ್ಕೆ ತಂದಿದ್ದಾರೆ. ವೈದ್ಯರಾಗಿದ್ದವರನ್ನು ರಾಜಕೀಯಕ್ಕೆ ಕರೆತಂದು ವಸೂಲಿಗಾಗಿ ಇಟ್ಟುಕೊಂಡಿದ್ದಾರೆ. ಡಿಸಿಎಂ ಕುಟುಂಬದಲ್ಲಿ ಎಷ್ಟು ಜನ ಅಧಿಕಾರದಲ್ಲಿದ್ದಾರೆ? ಕೇವಲ ನಮ್ಮ ಕುಟುಂಬ ಮಾತ್ರವಲ್ಲ, ಎರಡು-ಮೂರು ಜನ ಶಾಸಕರಿರುವ ಕುಟುಂಬಗಳು ಕಾಂಗ್ರೆಸ್‌ನಲ್ಲಿ ಸಾಕಷ್ಟಿವೆ,” ಎಂದು ಗುಡುಗಿದರು.

“ದೇವೇಗೌಡರು ನಮ್ಮನ್ನು ವಸೂಲಿ ಮಾಡಲು ರಾಜಕೀಯಕ್ಕೆ ತರಲಿಲ್ಲ, ಜನರ ಸಮಸ್ಯೆಗಳಿಗೆ ಸ್ಪಂದಿಸಲು ನಾವು ರಾಜಕೀಯಕ್ಕೆ ಬಂದೆವು. ಜನರೇ ನಮ್ಮನ್ನು ಈ ಸ್ಥಾನಕ್ಕೆ ತಂದಿದ್ದಾರೆ,” ಎಂದು ಅವರು ಸ್ಪಷ್ಟಪಡಿಸಿದರು.

ಮಂಡ್ಯದಲ್ಲಿ ARAI ಘಟಕ: ಹೊಸ ಟೌನ್‌ಶಿಪ್ ನಿರೀಕ್ಷೆ

ಮಂಡ್ಯ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡಿದ ಸಚಿವರು, “ಮೇ ತಿಂಗಳಲ್ಲಿ ಮಂಡ್ಯದಲ್ಲಿ ARAI (Automotive Research Association of India) ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸುವ ಗುರಿಯಿದೆ. ಈ ಘಟಕ ಸ್ಥಾಪನೆಯಿಂದ ಮಂಡ್ಯದಲ್ಲಿ ದೊಡ್ಡ ಮಟ್ಟದ ಟೌನ್‌ಶಿಪ್ ಬೆಳೆಯಲಿದೆ. ರಾಜ್ಯ ಸರ್ಕಾರ ಯಾವ ಜಾಗವನ್ನು ಅಭಿವೃದ್ಧಿ ಪಡಿಸಿಕೊಡಲಿದೆ ಎಂಬುದನ್ನು ಶೀಘ್ರವೇ ತಿಳಿಸಬೇಕಿದೆ,” ಎಂದರು.

ಸಿಎಂ ಸ್ಥಾನದ ಬಗ್ಗೆ ಸಿದ್ದರಾಮಯ್ಯಗೆ ವ್ಯಂಗ್ಯ

ಸಿದ್ದರಾಮಯ್ಯ ಅವರು 2028ರವರೆಗೂ ನಾನೇ ಸಿಎಂ ಎನ್ನುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಅಧಿಕಾರದ ರುಚಿ ನೋಡಿದ ಮೇಲೆ ಸಿದ್ದರಾಮಯ್ಯ ಅವರು ನಾನೇ ಪರ್ಮನೆಂಟ್ ಸಿಎಂ ಎನ್ನುತ್ತಿದ್ದಾರೆ. 2013ರಲ್ಲಿ ಇದು ನನ್ನ ಕೊನೆಯ ಚುನಾವಣೆ ಎಂದಿದ್ದರು. ಆದರೆ ಈಗ ಕೊನೆ ಉಸಿರಿರುವವರೆಗೂ ರಾಜಕೀಯ ಮಾಡುತ್ತೇನೆ ಎನ್ನುತ್ತಿದ್ದಾರೆ. ಅವರ ಭವಿಷ್ಯವನ್ನು ಮುಂದಿನ ಚುನಾವಣೆಯಲ್ಲಿ ಜನರೇ ತೀರ್ಮಾನ ಮಾಡುತ್ತಾರೆ,” ಎಂದು ವ್ಯಂಗ್ಯವಾಡಿದರು.

ಯುದ್ಧದ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ

ಜಾಗತಿಕ ಯುದ್ಧದ ಭೀತಿ ಮತ್ತು ಇಂಧನ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ ಅವರು, “ಬೇರೆ ದೇಶಗಳು ಲಾಕ್‌ಡೌನ್ ಪರಿಸ್ಥಿತಿ ತಲುಪಿವೆ. ಆದರೆ ಭಾರತವು ಉತ್ತಮ ಬಾಂಧವ್ಯದ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಕೇಂದ್ರ ಸರ್ಕಾರ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದರೆ, ನೀವು ಏನು ಮಾಡುತ್ತಿದ್ದೀರಿ?” ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.

ಐಪಿಎಲ್ ಟಿಕೆಟ್ ಬೇಡಿಕೆ: ಶಾಸಕರ ನಡೆಗೆ ನಗೆಪಾಟಲು

ಇತ್ತೀಚೆಗೆ ವಿಧಾನಸಭೆಯಲ್ಲಿ ಶಾಸಕರು ಐಪಿಎಲ್ ಟಿಕೆಟ್‌ಗಾಗಿ ಬೇಡಿಕೆ ಇಟ್ಟ ವಿಚಾರವನ್ನು ಪ್ರಸ್ತಾಪಿಸಿದ ಅವರು, “ಹಿಂದೆ ಶಾಸಕರಿಗೆ ಅಥವಾ ಮಂತ್ರಿಗಳಿಗೆ ಗೌರವಯುತವಾಗಿ ಒಂದು ಅಥವಾ ಎರಡು ಪಾಸ್ ನೀಡಲಾಗುತ್ತಿತ್ತು. ಆದರೆ ಅಸೆಂಬ್ಲಿಯಲ್ಲಿ ನಿಂತು 3-4 ಟಿಕೆಟ್ ಬೇಕು ಎಂದು ಕೇಳಿ ಶಾಸಕರು ನಗೆಪಾಟಲಿಗೀಡಾಗಿದ್ದಾರೆ,” ಎಂದು ಕುಟುಕಿದರು.

BIG NEWS: ಲಿಂಗಾಯತ ಜಂಗಮರು ‘ಪರಿಶಿಷ್ಟ ಜಾತಿ’ಯಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ

BREAKING: ಮತದಾನದ ದಿನದಂದು ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ ಘೋಷಿಸಿದ ಚುನಾವಣಾ ಆಯೋಗ

Share. Facebook Twitter LinkedIn WhatsApp Email

Related Posts

BREAKING : ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥರಾದ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ : ಆಸ್ಪತ್ರೆಗೆ ದಾಖಲು!

03/04/2026 4:41 PM1 Min Read

BREAKING: ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು

03/04/2026 4:41 PM1 Min Read

BREAKING : ಅಧಿವೇಶನದಲ್ಲಿ ‘ಇ-ವಿಧಾನ’ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ : ಸ್ಪೀಕರ್ ಯು.ಟಿ. ಖಾದರ್​​ ಘೋಷಣೆ

03/04/2026 4:02 PM2 Mins Read
Recent News

BREAKING : ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥರಾದ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ : ಆಸ್ಪತ್ರೆಗೆ ದಾಖಲು!

03/04/2026 4:41 PM

BREAKING: ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು

03/04/2026 4:41 PM

ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

03/04/2026 4:18 PM

BREAKING : ಅಧಿವೇಶನದಲ್ಲಿ ‘ಇ-ವಿಧಾನ’ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ : ಸ್ಪೀಕರ್ ಯು.ಟಿ. ಖಾದರ್​​ ಘೋಷಣೆ

03/04/2026 4:02 PM
State News
KARNATAKA

BREAKING : ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥರಾದ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ : ಆಸ್ಪತ್ರೆಗೆ ದಾಖಲು!

By kannadanewsnow0503/04/2026 4:41 PM KARNATAKA 1 Min Read

ಬೆಂಗಳೂರು : ಇಂದು ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಒಂದರಲ್ಲಿ ಕುಸಿದು ಬಿದ್ದು ಅಸ್ವಸ್ಥರಾದ ನಿವೃತ್ತ ನ್ಯಾಯಮೂರ್ತಿ ಸಂತೋಷ…

BREAKING: ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು

03/04/2026 4:41 PM

ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

03/04/2026 4:18 PM

BREAKING : ಅಧಿವೇಶನದಲ್ಲಿ ‘ಇ-ವಿಧಾನ’ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ : ಸ್ಪೀಕರ್ ಯು.ಟಿ. ಖಾದರ್​​ ಘೋಷಣೆ

03/04/2026 4:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.