ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿಯಾಗಿ ಮೈಸೂರು, ಕಲಬುರಗಿ ಮತ್ತು ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚಿಸಿದರು.
ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಾದ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರ 319.14 ಕೋಟಿ ರೂ.ಗಳ ವೆಚ್ಚವನ್ನು ಭರಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.
“ವಿಸ್ತರಣಾ ಕಾರ್ಯಗಳನ್ನು ಯೋಜಿಸಲು, ಯುಟಿಲಿಟಿ ಸ್ಥಳಾಂತರಕ್ಕೆ ಅಗತ್ಯವಿರುವ 101.84 ಕೋಟಿ ರೂ.ಗಳ ಅಂದಾಜು ವೆಚ್ಚವನ್ನು ಭರಿಸಲು ಮತ್ತು ರನ್ವೇ ವಿಸ್ತರಣೆ / ಅಭಿವೃದ್ಧಿ ಕಾರ್ಯಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವನ್ನು ಕೋರಲಾಗಿದೆ” ಎಂದು ಅವರು ಕೇಂದ್ರ ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಸಭೆಯಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ರಾಜ್ಯ ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು