Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ತಂದೆ `ವಿಲ್’ ಬರೆಯದೇ ಮೃತಪಟ್ಟರೆ ವಿವಾಹಿತ ಮಗಳಿಗೂ ಆಸ್ತಿಯಲ್ಲಿ ಸಮಾನ ಪಾಲು ಸಿಗುತ್ತಾ?

BIG NEWS : ಮಧ್ಯ ಪ್ರಾಚ್ಯ ಯುದ್ಧ ಅಂತ್ಯ ಬೆನ್ನಲ್ಲೆ, ರಾಜ್ಯದಲ್ಲಿ ಟೊಮೆಟೊ ಬೆಲೆ ಏರಿಕೆ : ರೈತರಲ್ಲಿ ಸಂತಸ!

BREAKING : ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಗೆ ಲಘು ಹೃದಯಾಘಾತ : ಆಸ್ಪತ್ರೆಗೆ ದಾಖಲು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದ ‘ಮಾಜಿ ಪ್ರಧಾನಿ HDD’ಗೆ, ಈ ತಿರುಗೇಟು ಕೊಟ್ಟ ‘ಸಿಎಂ ಸಿದ್ಧರಾಮಯ್ಯ’
KARNATAKA

ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದ ‘ಮಾಜಿ ಪ್ರಧಾನಿ HDD’ಗೆ, ಈ ತಿರುಗೇಟು ಕೊಟ್ಟ ‘ಸಿಎಂ ಸಿದ್ಧರಾಮಯ್ಯ’

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಅಂತ ಹೇಳಿದ್ದರು. ಅವರ ಹೇಳಿಕೆಗೆ ಖಡಕ್ ತಿರುಗೇಟು ನೀಡಿರೋ ಸಿಎಂ ಸಿದ್ಧರಾಮಯ್ಯ, ಏನು ಹೇಳಿದ್ದಾರೆ ಅಂತ ಮುಂದೆ ಓದಿ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು,  ನನ್ನ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನುಸರಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು ಎಂದು ತಿಳಿಸಿದ್ದಾರೆ.

ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. “ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ” ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು ಸಂಗ ದೋಷದ ಫಲ ಎಂದಿದ್ದಾರೆ.

ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ ಎಂದು ಹೇಳಿದ್ದಾರೆ.

ಜಾತ್ಯತೀತ ಜನತಾ ಪಕ್ಷ ಎನ್ನುವುದು “ಬಿಜೆಪಿಯ ಬಿ ಟೀಮ್” ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ. ಈ ಪಕ್ಷದ ಜಾತ್ಯತೀತ ಮುಖವನ್ನು ನಿಜ ಎಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ. ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ. ಜಾತ್ಯತೀತತೆ ಮತ್ತು ಸೌಹಾರ್ದತೆಯ ಪರಂಪರೆಯ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ತಿಳಿಸಿದ್ದಾರೆ.

ನನ್ನ ಮತ್ತು ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ : ಮಾಜಿ ಸಚಿವ ವಿ ಸೋಮಣ್ಣ

BREAKING:ಗಣರಾಜ್ಯೋತ್ಸವಕ್ಕೆ ಬ್ರ್ಯಾಂಡ್​ ಬೆಂಗಳೂರು ಸ್ತಬ್ಧಚಿತ್ರ ಆಯ್ಕೆ

Share. Facebook Twitter LinkedIn WhatsApp Email

Related Posts

BIG NEWS: ತಂದೆ `ವಿಲ್’ ಬರೆಯದೇ ಮೃತಪಟ್ಟರೆ ವಿವಾಹಿತ ಮಗಳಿಗೂ ಆಸ್ತಿಯಲ್ಲಿ ಸಮಾನ ಪಾಲು ಸಿಗುತ್ತಾ?

3 Mins Read

BIG NEWS : ಮಧ್ಯ ಪ್ರಾಚ್ಯ ಯುದ್ಧ ಅಂತ್ಯ ಬೆನ್ನಲ್ಲೆ, ರಾಜ್ಯದಲ್ಲಿ ಟೊಮೆಟೊ ಬೆಲೆ ಏರಿಕೆ : ರೈತರಲ್ಲಿ ಸಂತಸ!

1 Min Read

BREAKING : ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಗೆ ಲಘು ಹೃದಯಾಘಾತ : ಆಸ್ಪತ್ರೆಗೆ ದಾಖಲು!

1 Min Read
Recent News

BIG NEWS: ತಂದೆ `ವಿಲ್’ ಬರೆಯದೇ ಮೃತಪಟ್ಟರೆ ವಿವಾಹಿತ ಮಗಳಿಗೂ ಆಸ್ತಿಯಲ್ಲಿ ಸಮಾನ ಪಾಲು ಸಿಗುತ್ತಾ?

BIG NEWS : ಮಧ್ಯ ಪ್ರಾಚ್ಯ ಯುದ್ಧ ಅಂತ್ಯ ಬೆನ್ನಲ್ಲೆ, ರಾಜ್ಯದಲ್ಲಿ ಟೊಮೆಟೊ ಬೆಲೆ ಏರಿಕೆ : ರೈತರಲ್ಲಿ ಸಂತಸ!

BREAKING : ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಗೆ ಲಘು ಹೃದಯಾಘಾತ : ಆಸ್ಪತ್ರೆಗೆ ದಾಖಲು!

BIG NEWS : ಬೆಂಗಳೂರಲ್ಲಿ ಬಾಲಕಿ ವೆನಿಲ್ಲಾ ಕೇಸ್ ಗೆ ಬಿಗ್ ಟ್ವಿಸ್ಟ್ : ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಇನ್ಸ್ಪೆಕ್ಟರ್

State News
KARNATAKA

BIG NEWS: ತಂದೆ `ವಿಲ್’ ಬರೆಯದೇ ಮೃತಪಟ್ಟರೆ ವಿವಾಹಿತ ಮಗಳಿಗೂ ಆಸ್ತಿಯಲ್ಲಿ ಸಮಾನ ಪಾಲು ಸಿಗುತ್ತಾ?

By kannadanewsnow57 KARNATAKA 3 Mins Read

ಬೆಂಗಳೂರು: ಸಮಾಜದಲ್ಲಿ ಆಸ್ತಿ ವಿವಾದಗಳು ಮತ್ತು ಹಂಚಿಕೆಗಳ ಬಗ್ಗೆ ದಿನನಿತ್ಯವೂ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಅದರಲ್ಲೂ ವಿಶೇಷವಾಗಿ ತಂದೆ ಗಳಿಸಿದ…

BIG NEWS : ಮಧ್ಯ ಪ್ರಾಚ್ಯ ಯುದ್ಧ ಅಂತ್ಯ ಬೆನ್ನಲ್ಲೆ, ರಾಜ್ಯದಲ್ಲಿ ಟೊಮೆಟೊ ಬೆಲೆ ಏರಿಕೆ : ರೈತರಲ್ಲಿ ಸಂತಸ!

BREAKING : ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಗೆ ಲಘು ಹೃದಯಾಘಾತ : ಆಸ್ಪತ್ರೆಗೆ ದಾಖಲು!

BIG NEWS : ಬೆಂಗಳೂರಲ್ಲಿ ಬಾಲಕಿ ವೆನಿಲ್ಲಾ ಕೇಸ್ ಗೆ ಬಿಗ್ ಟ್ವಿಸ್ಟ್ : ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಇನ್ಸ್ಪೆಕ್ಟರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.