ದಾವಣಗೆರೆ : ಸಿಎಂ ವಿಚಾರವಾಗಿ ಹೈಕಮಾಂಡ್ ಏನೇ ಕ್ರಮ ತೆಗೆದುಕೊಂಡರು ಅದಕ್ಕೆ ಬದ್ಧ ಸಿಎಂ ಆಗಿ ಸದ್ಯ ಸಿದ್ದರಾಮಯ್ಯ ಇದ್ದಾರೆ ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತಿರುವುದು ಟಗರು ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ನಾವು ಬಂದಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದರು.
ಬಿಜೆಪಿಯವರು ಯಾವುದೇ ಕಾರಣಕ್ಕೂ ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ. ಬಿಜೆಪಿಯವರು ಬೇಕಾದರೆ ವಿಷ ಕುಡಿಯುತ್ತಾರೆ ಹೊರತು ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ ಎಂದು ದಾವಣಗೆರೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದರು.
ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಅನ್ನೋ ವಿಚಾರವಾಗಿ ಎಲ್ಲರೂ ರಾತ್ರಿ ಕನಸು ಕೊಂಡರೆ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಹಗಲುಗನಸು ಕಾಣುತ್ತಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್ ಪಕ್ಷದಲ್ಲಿದ್ದಾಗ ಎಷ್ಟು ಸ್ಥಾನ ಗೆದ್ದಿದೆ? ಕುಮಾರಸ್ವಾಮಿ ಬಂದಾಗ ಜೆಡಿಎಸ್ ಎಷ್ಟು ಸ್ಥಾನ ಗೆದ್ದಿದೆ? ಎಂದು ದಾವಣಗೆರೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದರು.








