ಸಿದ್ದರಾಮಯ್ಯ ಅಂದ್ರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ. ಒಂದು ಸಿದ್ದಾಂತ. ಬೆವರಿನ‌ ಸಂಸ್ಕೃತಿಗೆ ಮೌಲ್ಯ ಮತ್ತು ಘನತೆ ತಂದು ಕೊಡುವ ಸಿದ್ಧಾಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.‌ ಪತ್ರಕರ್ತನಾಗಿ ಎರಡು ಕಣ್ಣುಗಳಿಂದ ಸಮಾಜವನ್ನು ನೋಡುತ್ತಿದ್ದ ನನಗೆ, ಸಮಾಜದ ಲಕ್ಷಾಂತರ ಕಣ್ಣುಗಳು ನನ್ನೊಬ್ಬನನ್ನು ಗಮನಿಸುತ್ತಿರುತ್ತದೆ ಎನ್ನುವ ಸಾಮಾಜಿಕ ಎಚ್ಚರವನ್ನು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಲ್ಲಿ ಕಲಿತುಕೊಂಡೆ. … Continue reading ಸಿದ್ದರಾಮಯ್ಯ ಅಂದ್ರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್