ವಿಜಯಪುರ: PFI, SDPI ಬೆಳೆಯಲು ಕಾರಣವೇ ಸಿದ್ದರಾಮಯ್ಯನವರೇ ಕಾರಣ. ಅವರಿಂದಲೇ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
BIG NEWS: ಬೆಳಗಾವಿಯಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಬಾಲಕನಿಗೆ ಚಾಕು ಇರಿತ; ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, SDPI ಮತ್ತು PFI ಬೆಳೆಯಲು ಸಿದ್ದರಾಮಯ್ಯ ಅವರೇ ಕಾರಣ.ಸಿದ್ದರಾಮಯ್ಯ ಅವಧಿಯಲ್ಲೆ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೇ ಬಂಧಿಸಿದ್ದಾರೆ ಎಂದರು.
BIG NEWS: ಬೆಳಗಾವಿಯಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಬಾಲಕನಿಗೆ ಚಾಕು ಇರಿತ; ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ
ಪಿಎಫ್ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹ ನಡೆಯುತ್ತಿದೆ. ನಮ್ಮ ಸರ್ಕಾರ ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಿಎಫ್ಐ ಮೇಲೆ ದಾಳಿ ರಾಜಕೀಯ ಪ್ರೇರಿತ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲದಕ್ಕೂ ರಾಜಕೀಯ ಪ್ರೇರಿತ ಎನ್ನುತ್ತಾರೆ. ಭಯೋತ್ಪಾದನೆಗೆ ರಾಜಕೀಯ ಪ್ರೇರಣೆ ನೀಡಿದವರು ಯಾರು ಎಂದು ಪ್ರಶ್ನಿಸಿದರು.