ದಾವಣಗೆರೆ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ಹಣ ವರ್ಗಾವಣೆ ಪ್ರಕರಣ ಹಾಗೂ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100% ಲೂಟಿ ಸರ್ಕಾರ ಎಂದು ಆರೋಪಿಸಿದರು.
ಇಂದು ದಾವಣಗೆರೆಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣ ಪ್ರಕರಣದ ಕುರಿತು ದಾವಣಗೆರೆಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100% ಸರ್ಕಾರ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿಗಳ ಮೂಗಿನ ಅಡಿಯಲ್ಲಿ ಎಲ್ಲಾ ಹಣ ವರ್ಗಾವಣೆ ಆಗಿದೆ. ಮುಡಾದಲ್ಲಿ 5,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹೀಗಾಗಿ ಮುಡಾ ಹಗರಣ ಸಿಬಿಐಗೆ ಕೊಡಬೇಕು. ತಮ್ಮ ಕುರ್ಚಿಗೋಸ್ಕರ ಕೀಳು ಮಟ್ಟದ ಆಡಳಿತ ನಡೆಸುತ್ತಿದ್ದಾರೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಅಧಿಕಾರದಲ್ಲಿ ಇರಲು ನಾಲಾಯಕ್ ಬದ್ರ ಡ್ಯಾಮ್ ಸೋರಿಕೆ ದುರಸ್ತಿ ಮಾಡದಿದ್ದರೆ ಉಗ್ರ ಹೋರಾಟ ಮಾಡಲಾಗುತ್ತದೆ ದುರಸ್ತಿ ಮಾಡಿದ್ದೇವೆ ಎಂದು ಡ್ಯಾಮಿಗೆ ಕೆಪಿ ಹಚ್ಚಿ ಹೋಗಿದ್ದಾರೆ 150 ಕೋಟಿ ಬಿಡುಗಡೆ ಮಾಡಿ ತಜ್ಞರನ್ನು ಕರೆಸಿ ದುರಸ್ತಿ ಮಾಡಬೇಕು ಇಲ್ಲದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದು ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮಾಜಿ ಸಚಿವ ರೇಣುಕಾಚಾರ್ಯ.