ಬೆಂಗಳೂರು: ಪಿಎಫ್ ಐ ಸಂಘಟನೆ ಮೇಲೆ ಸಿದ್ದರಾಮಯ್ಯಗೆ ಪ್ರೀತಿ ಇದೆ. ಹೀಗಾಗಿ ಅವರು ಏನೇನೋ ಮಾಡುತ್ತಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಸುರಕ್ಷತೆ ವಿಚಾರದಲ್ಲಿ ಬಿಜೆಪಿ ಯಾವತ್ತು ಮತಬ್ಯಾಂಕ್ ರಾಜಕಾರಣ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ ಐ ಬ್ಯಾನ್ ಮಾಡಿರುವುದನ್ನ ಕಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಪಿಎಫ್ ಐ ಭಯೋತ್ಪಾದಕ ಚಟುವಟಿಕೆಗಳು, ದೇಶ ದ್ರೋಹ ಕೃತ್ಯಗಳ ಬಗ್ಗೆ ಜನರಿಗೆ ಮಾಹಿತಿ ಇದೆ. ಇಂಥಹ ಸಂದರ್ಭದಲ್ಲಿ ಪಿಎಫ್ ಐ ಬ್ಯಾನ್ ಮಾಡಿರುವುದನ್ನ ವಿರೋಧಿಸಿದರೆ ಜನ ಒದೆಯುತ್ತಾರೆ ಅಷ್ಟೇ. ಪಿಎಫ್ ಐ ಪರ ಮಾತನಾಡಿದ್ರೆ ಏಲ್ಲಿ ದೇಶದ ಜನರ ಕಂಗೆಣ್ಣಿಗೆ ಗುರಿಯಾಗಬೇಕಾಗುತ್ತೆ ಎಂಬುದು ಕಾಂಗ್ರೆಸ್ ಗೆ ಚಿಂತೆಯಾಗಿದೆ.