ಮೈಸೂರು: ಸತತ 17ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿ ಸಿಎಂ ಸಿದ್ಧರಾಮಯ್ಯ ದಾಖಲೆ ಬರೆದಿದ್ದಾರೆ. ಇದರ ಬೆನ್ನಲ್ಲೇ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯೋ ಅನುಮಾನಕ್ಕೂ ಕಾರಣವಾಗಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಅವರ ಹೇಳಿಕೆಯಾಗಿದೆ.
ಇಂದು ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕಾಂಗ್ರೆಸ್ ಹೈಕಮಾಂಡ್ ಅವಕಾಶ ಕೊಟ್ಟರೇ ಮತ್ತೆ ಎರಡು ಬಜೆಟ್ ಮಂಡನೆ ಮಾಡಲಿದ್ದೇನೆ. ಅವರು ಮುಂದುವರೆಯಿರಿ ಅಂತ ಹೇಳಿದ್ರೆ ಮುಂದುವರೆಯುತ್ತೇನೆ. ಇದೆಲ್ಲವೂ ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳುವ ಮೂಲಕ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರಾ ಸಿದ್ಧರಾಮಯ್ಯ ಎನ್ನುವ ಅನುಮಾನವನ್ನು ಹುಟ್ಟು ಹಾಕಿದ್ದಾರೆ.
ನನಗೆ ಯಾರು ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ. ನನಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯವಾಗಿದೆ. ನನಗೆ ಹೈಕಮಾಂಡ್ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಮೈಸೂರು ಜನತೆಯಲ್ಲ, ಇಡೀ ನಾಡಿನ ಜನ ನಾನು ಇರಬೇಕೆಂದು ಬಯಸಿದ್ದಾರೆ ಎಂದರು.
ನಾನು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ನನಗೆ ಬಜೆಟ್ ದಾಖಲೆಗಳ ಮೇಲೆ ನಂಬಿಕೆಯಿಲ್ಲ. ಆದರೇ ಇನ್ನೂ ಎರಡು ಬಜೆಟ್ ಮಂಡಿಸುವ ಅವಕಾಶ ಸಿಕ್ಕರೇ ಮಂಡಿಸುತ್ತೇನೆ. ಅದೆಲ್ಲವೂ ಹೈಕಮಾಂಡ್ ತೀರ್ಮಾನದ ಮೇಲೆ ನಿಂತಿದೆ. ಜನ ಅವಕಾಶ ಕೊಟ್ಟರೇ ಮಂಡಿಸೋದಾಗಿ ತಿಳಿಸಿದರು.
BREAKING : ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ : 5 ವರ್ಷ ನಾನೇ CM ಎಂದ ಸಿದ್ದರಾಮಯ್ಯ
BREAKING : ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ : 5 ವರ್ಷ ನಾನೇ CM ಎಂದ ಸಿದ್ದರಾಮಯ್ಯ








