ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಮಠಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ರಂಭಾಪುರಿ ಶ್ರೀಗಳ ಆಶಿರ್ವಾದ ಪಡೆದರು. ನಂತರ ಶ್ರೀಗಳು ಪ್ರಸನ್ನ ವೀರಸೋಮೇಶ್ವರ ಸ್ವಾಮೀಜಿ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯ ಮೊಟ್ಟ ಮೊದಲಬಾರಿಗೆ ಮಠಕ್ಕೆ ಬಂದಿದ್ದರು. ಪೀಠಕ್ಕೆ ಬಂದು ಆಶೀರ್ವಾದ ಪಡೆಯುವುದು ಅವರ ಬಯಕೆಯಾಗಿತ್ತು. ಹೀಗಾಗಿ ಇಂದು ಮಠಕ್ಕೆ ಭೇಟಿ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ವೀರಶೈವ , ಲಿಂಗಾಯುತ ಧರ್ಮ ಒಡೆಯಲು ಪ್ರಯತ್ನಿಸಿರಲಿಲ್ಲ ಅಂದ್ರು. ಆದರೆ ಕೆಲವ್ರು, ನನ್ನದಾರಿ ತಪ್ಪಿಸಿದ್ದಾರೆ ಎಂದು ಹೇಳಿದ್ದರು. ಈ ವಿಚಾರದಲ್ಲಿ ಅವರಿಗೆ ನಿಜವಾಗಿಯೂ ಪಶ್ಚಾತ್ತಾಪವಾಗಿದೆ ಎಂದು ಶ್ರೀಗಳು ಹೇಳಿದ್ದಾರೆ.
ಹಿಂದೆ ಸಿಕ್ಕಾಗ ಆಹ್ವಾನಿಸಿದ್ದಕ್ಕೆ ಮಾತಿನಂತೆ ಮಠಕ್ಕೆ ಭೇಟಿ ನೀಡಿದ್ದಾರೆ ಎಂದರು.