ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಕುರಿತು ಬಿಜೆಪಿ ಪ್ರತಿಕ್ರಿಯೆ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ದಲಿತರಿಗೆ ದ್ರೋಹ ಬಗೆದು ಅಕ್ರಮವಾಗಿ ಮುಡಾ ಸೈಟುಗಳನ್ನು ಕಬಳಿಸಿರುವ ಭ್ರಷ್ಟ ಸಿಎಂ ಸಿದ್ದರಾಮಯ್ಯನವರೇ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂದು ಆಗ್ರಹಿಸಿದೆ.
ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಅತ್ಯಂತ ಸ್ವಾಗತಾರ್ಹ. ದಲಿತರ ಭೂಮಿಯನ್ನು ನುಂಗಿ, ಅಕ್ರಮವಾಗಿ ಅತ್ಯಂತ ಬೆಲೆಬಾಳುವ 14 ಸೈಟುಗಳನ್ನು ಕಬಳಿಸಿರುವ ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಲ್ಲಿ ಮುಂದುವರೆಯಲು ಅರ್ಹರಲ್ಲ ಎಂದು ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ತನಿಖೆಗೆ ಒಳಗಾಗಲಿ.
ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.