ಬೆಂಗಳೂರು : ರಾಜ್ಯದಲ್ಲಿ ಕನ್ನಡದ ಬದಲಾಗಿ ಹಿಂದಿ ಭಾಷೆ ಹೇರಿಕೆ ವಿಚಾರವಾಗಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವಿಟ್ಟರ್ನಲ್ಲಿ ಕಿಡಿಕಾರಿದ್ದಾರೆ
ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು @CMofKarnataka ಅವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ @karkalasunil ಅವರು ಸ್ಪಷ್ಟಪಡಿಸಬೇಕು.
4/6#ಹಿಂದಿಹೇರಿಕೆ pic.twitter.com/uQWMXuq8nP— Siddaramaiah (@siddaramaiah) August 5, 2022
ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ʼ ಸಂಕಲ್ಪ ಸೆ ಸಿದ್ದಿʼ ಎಂಬ ಕಾರ್ಯಕ್ರಮ ಹಿಂದಿಮಯವಾಗಿತ್ತು. ಇಡೀ ಕಾರ್ಯಕ್ರಮ ಬ್ಯಾನರ್ ಸಂಪೂರ್ಣ ಹಿಂದಿಯಲ್ಲಿತ್ತು. ಕೇಂದ್ರ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಕನ್ನಡ-ಕನ್ನಡಿಗ-ಕರ್ನಾಟಕ್ಕೆ ಅವಮಾನ ಮಾಡುತ್ತಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು @karkalasunil?
5/6#ಹಿಂದಿಹೇರಿಕೆ— Siddaramaiah (@siddaramaiah) August 5, 2022
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿಂದು ಕಿರೀಟ ಇಟ್ಟುಕೊಂಡು ಮೆರೆಸ್ತಿದೆ ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ ರಾಜ್ಯಸರ್ಕಾರ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತಿಯಾಗಿದೆ. ಮೊದಲು ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ ಶರಣಾಗತಿ ಆಗುವುದು ಕನ್ನಡದ ಮಣ್ಣಿನ ಗುಣವಲ್ಲವ.
ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು 'ಉತ್ತರ ಕುಮಾರ'ರ ಕಾಲಡಿ ಯಾಕೆ ಅಡವು ಇಡುತ್ತೀರಾ?
ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ @karkalasunil ಅವರಿಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು..!!
6/6#ಹಿಂದಿಹೇರಿಕೆ— Siddaramaiah (@siddaramaiah) August 5, 2022
ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವರು ಸುನೀಲ್ ಕುಮಾರ್ಗೆ ಇಂತಹ ಗುಲಾಮಿ ಮನಸ್ಥಿತಿ ಬರಬಾರದಿತ್ತು. ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ & ಸಂಸ್ಕೃತಿ ಇಲಾಖೆಯೇ ಎಂಬುವುದನ್ನು ಸಿಎಂ ಬೊಮ್ಮಾಯಿ, ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಬೇಕು ಎಂದು ಟ್ವಿಟ್ಟರ್ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.