ಬೆಂಗಳೂರು : ರಾಜ್ಯದಲ್ಲಿ ಮತ್ತೆ ಹೆಚ್ಚುವರಿ ಡಿಸಿಎಂ ಸ್ಥಾನ ಹುದ್ದೆ ನೇಮಕ ಮಾಡುವಂತೆ ಕೂಗು ಕೇಳಿ ಬರುತ್ತಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೇಂದ್ರ ರಾಜಣ್ಣ ಅವರಿಗೆ ಕರೆಯ ಮೂಲಕ ಮಾತನಾಡಿದ್ದು ಬಹಿರಂಗವಾಗಿ ಡಿಸಿಎಂ ಹುದ್ದೆ ಕುರಿತು ಮಾತನಾಡದಂತೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ತಾಕಿದ್ದು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಸಚಿವ ಕೆ ಎನ್ ರಾಜಣ್ಣ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚಿಸಿದ್ದಾರೆ. ಸಚಿವ ರಾಜಣ್ಣ ಅವರಿಗೂ ಕೂಡ ಬಹಿರಂಗವಾಗಿ ಮಾತನಾಡದಂತೆ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬಹಿರಂಗ ಹೇಳಿಕೆಗಳಿಂದ ಸರ್ಕಾರ ಹಾಗೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಯಾವುದೇ ಸಚಿವರಾಗಲಿ ಶಾಸಕರಾಗಲಿ ಡಿಸಿಎಂ ಹುದ್ದೆ ಕುರಿತಂತೆ ಬಹಿರಂಗವಾಗಿ ಹೇಳಿಕೆ ನೀಡಬಾರದು. ಈ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಿಎಂ ಸಿದ್ದರಾಮಯ್ಯ ತಾಕಿದ್ದು ಮಾಡಿದ್ದಾರೆ.