ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರ ಗೊಂದಲ ವಿಚಾರವಾಗಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, “ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ, ಕ್ಷೇತ್ರ ಹುಡುಕುವ ಪರಿಸ್ಥಿತಿ ಎದುರಾಗಿದೆ ಎಂದು ಕಿಡಿಕಾರಿದ್ದಾರೆ.
ಮುಂದಿನ ವಿಧಾನ ಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಭಾರೀ ರಣತಂತ್ರ ರೂಪಿಸುತ್ತಿದ್ದು, ಅದರಲ್ಲೂ ಮುಖ್ಯವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರ ಗೊಂದಲ ವಿಚಾರವಾಗಿ ಬಹುದೊಡ್ಡ ಚರ್ಚೆಯಾಗುತ್ತಿದೆ. ಈ ಸಂಬಂಧ ಪಟ್ಟದಂತೆ ಮಾಧ್ಯಮಗಳೊಂದಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ. ಕ್ಷೇತ್ರ ಹುಡುಕಿಕೊಳ್ಳಬೇಕಾದಸ್ಥಿತಿ ಎದುರಾಗಿದೆ ಅಂದ್ರೆ ಸಿದ್ದರಾಮಯ್ಯರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಜನರಿಗೆ ವಿಶ್ವಾಸ ಇಲ್ಲ ಎಂಬುದು ಬಹಳ ಸ್ಪಷ್ಟವಾಗಿದೆ ಎಂದು ಪ್ರತಾಪ್ ಸಿಂಹ ಟೀಕೆಮಾಡಿದ್ದಾರೆ.
BIG NEWS : ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಪಾರ್ಥಿವ ಶರೀರದ ಅಂತಿಮ ದರ್ಶನ BGS ಆಸ್ಪತ್ರೆಯಲ್ಲಿ ಮುಕ್ತಾಯ