ಹುಬ್ಬಳ್ಳಿ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 202-26ನೇ ಸಾಲಿನ ದಾಖಲೆಯ 16ನೇ ಬಜೆಟ್ ಮಂಡಿಸಿದರು. ಈ ಒಂದು ಬಜೆಟ್ ಮಂಡನೆ ವಿಷಯದ ಕುರಿತು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಇನ್ನು ಮೂರು ವರ್ಷ ಸಿಎಂ ಆಗಿರುತ್ತಾರೆ ಎಂಬುದು ನಮ್ಮ ಭಾವನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 5 ವರ್ಷ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಇಳಿಯುತ್ತಾರೆ ಎಂದು ಹೇಳಿಲ್ಲ. ಕೆಲವರು ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಇನ್ನು ಮೂರು ವರ್ಷ ಇರುತ್ತಾರೆ ಎಂಬುದು ನಮ್ಮ ಭಾವನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ








