ಹಾಸನ : ಲೋಕಸಭೆ ಚುನಾವಣೆಯ ನಂತರ ಸಿಎಂ ಬದಲಾಗುವ ಸಾಧ್ಯತೆ ಇದೆ ಎನ್ನುವ ಸುದ್ದಿಗಳೆಲ್ಲ ಊಹಾಪೋಹ. ಮುಂದಿನ ಐದು ವರ್ಷಗಳವರೆಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರೆಯಲಿದ್ದಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಕೇಂದ್ರದಲ್ಲಿ ‘ಕಾಂಗ್ರೆಸ್’ ಬಂದರೆ ಮೋದಿ ‘ನರ ಕಟ್’ : ತಲ್ವಾರ್ ಪ್ರದರ್ಶಿಸಿ ಪ್ರಧಾನಿ, ಸಿಎಂ ಯೋಗಿಗೆ ಬೆದರಿಕೆ
ಹಾಸನ ಜಿಲ್ಲೆಯ ಹಳೆ ನರಸಿಪುರ ತಾಲೂಕಿನ ಹಳ್ಳಿಮೈಸೂರು ಗ್ರಾಮದಲ್ಲಿ ಲಕ್ಷ್ಮಮ್ಮ ಹನುಮಶೆಟ್ಟಿ ಜ್ಞಾಪಕಾರ್ಥ ಮುಖ್ಯಮಂತ್ರಿ ಸಿದ್ಧರಾಮಯ್ಯ ವೈದ್ಯಕೀಯ ಸಲಹೆಗಾರ ಡಾ. ಎಚ್.ರವಿಕುಮಾರ್ ಶೀಗೆತಾಳಮ್ಮ ದೇವಾಲಯದ ಆವರಣದಲ್ಲಿ ನಿರ್ಮಿಸಿರುವ ಸಭಾಮಂಟಪ, ವಸತಿ ಗೃಹಗಳು ಮತ್ತು ಪಾಕಶಾಲಾ ಕೊಠಡಿಗಳ ಉದ್ಘಾಟನೆ ನೆರವೇರಿಸಿ, ಸುದ್ದಿಗಾರರ ಜತೆ ಮಾತನಾಡಿದರು.
ಸರ್ಕಾರ ಐದು ವರ್ಷಗಳ ಅವಧಿ ಪೂರೈಸುತ್ತದೆ. ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ನಂಬಿಕೆ ಇದೆ. ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಕೆಲ ಶಾಸಕರು ಹೇಳುತ್ತಾರೆ. ಆದರೆ ಇಂತಹ ಗೊಂದಲಗಳು ಸಹಜ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ಧರಾಮಯ್ಯ ಹೇಳಿದರು.
ಲೋಕಸಭಾ ಚುನಾವಣೆ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸಿ, ಪಕ್ಷದ ವರಿಷ್ಠರು ಇನ್ನೂ ತೀರ್ಮಾನ ಮಾಡಿಲ್ಲ. ನಾನು ಆಕಾಂಕ್ಷಿ ಕೂಡ ಅಲ್ಲಾ, ವರಿಷ್ಠರು ಏನು ತೀರ್ಮಾನ ಮಾಡ್ತಾರೆ ನೋಡೋಣ. ಅವರ ತೀರ್ಮಾನಕ್ಕೆ ಬದ್ಧರಾಗಿರಬೇಕಾಗುತ್ತದೆ. ವರುಣ ಕ್ಷೇತ್ರದ ಜನರು ಕ್ಷೇತ್ರ ಬಿಟ್ಟು ಹೋಗಬೇಡಿ ಎಂದು ಹೇಳುತ್ತಿದ್ದಾರೆ. ವರುಣ ಕ್ಷೇತ್ರ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಡುವುದಿಲ್ಲ ಎಂದು ಹೇಳಿದರು.
ಸಿವಿಲ್ ಪ್ರಕ್ರಿಯಾ ಸಂಹಿತೆ ಕಾಯ್ದೆ ಜಾರಿ: ಬಡವರಿಗೆ 6 ತಿಂಗಳಲ್ಲಿ ನ್ಯಾಯದಾನ