ಬೆಂಗಳೂರು : ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ.ದೇವರಾಜ ಅರಸು ಅವರು 7 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದರು. ಸಿದ್ದರಾಮಯ್ಯ 7 ವರ್ಷಗಳಲ್ಲ 10 ವರ್ಷ ಸಿಎಂ ಆಗಿರುತ್ತಾರೆ ಎಂದು ಬೆಂಗಳೂರಿನಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದೆ. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ ಈ ಅವಧಿ ಪೂರೈಸಿ ಮತ್ತೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಮುಂದಿನ ಬಾರಿಯೂ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಬೆಂಗಳೂರಿನಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ತಿಳಿಸಿದರು.
ಇನ್ನು ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ ಬಿ ಪಾಟೀಲ್ ಮೆಟ್ರೋ ಜೊತೆಗೆ ನಾವು ಕೂಡ ಸಹಭಾಗಿತ್ವ ಹೊಂದಿದ್ದೇವೆ. ಮೆಟ್ರೋ ಪ್ರಯಾಣದರ ಇಳಿಸಿದರೆ ಸಾಮಾನ್ಯ ಜನರಿಗೆ ಅನುಕೂಲ ಆಗಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಬಿಎಂಆರ್‌ಸಿಎಲ್ ಎಂಡಿ ಅವರಿಗೆ ಮೆಟ್ರೋ ಟಿಕೆಟ್ ದರ ಇಳಿಸುವಂತೆ ಸೂಚನೆ ನೀಡಿದ್ದಾರೆ ಎಂದು ಬೆಂಗಳೂರಿನಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ತಿಳಿಸಿದರು.