ದಾವಣಗೆರೆ : ರಾಜ್ಯದಲ್ಲಿ ಸಿಎಂ ಕುರ್ಚಿ ಜಟಾಪಟಿ ನಡೆಯುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಕರೆದು ಎಲ್ಲದಕ್ಕೂ ತೆರೆ ಎಳೆದರು. ಇದೀಗ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಹೇಳಿದ್ದಾರೆ.
ಕರ್ನಾಟಕದ ಕುರ್ಚಿ ಕಿತ್ತಾಟಕ್ಕೆ ಈಗ ಬ್ರೇಕ್ ಬಿದ್ದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬದಲಾವಣೆ ವಿಷಯ ಪಕ್ಷದ ಮುಂದೆಯೇ ಇಲ್ಲ. ಅಂತೆ ಕಂತೆ ಮಾತುಗಳು ಈಗ ಯಾಕೆ? ಯಾವುದೇ ಗೊಂದಲ ಇರಬಾರದು ಎಂದು ಸಿಎಂ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ ಎಂದರು.
ನಮ್ಮ ಸರ್ಕಾರ ಸ್ಥಿರವಾಗಿದ್ದು ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಬಿಜೆಪಿಯವರು ವಿಧಾನಸೌಧದಲ್ಲಿ ಕಾಂಗ್ರೆಸ್‌ನವರು ಶಾಸಕರ ಖರೀದಿ ಕೇಂದ್ರ ಮಾಡಿದ್ದಾರೆ ಎಂದು ಅರೋಪ ಮಾಡುತ್ತಾರೆ. ಅವರು ಹೇಗೆ ಅಧಿಕಾರಕ್ಕೆ ಬಂದರು ಎಂಬುದನ್ನು ಹೇಳಲಿ. ಅವರೇನು ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ದಾರಾ? ಕನ್ನೇರಿ ಶ್ರೀಗಳು ಏನ್ ಹೇಳಿಕೆ ನೀಡುತ್ತಾರೆ ಎನ್ನುವುದು ಗೊತ್ತಿಲ್ಲ. ನನಗೆ ಬಾಬಾ ಸಾಹೇಬರ ಸಂವಿಧಾನದ ಬಗ್ಗೆ ಮಾತ್ರ ತಿಳಿದಿದೆ ಎಂದರು.








