ಬೆಂಗಳೂರು : ಮುಡಾ ಸೇರಿದಂತೆ ವಿವಿಧ ಭ್ರಷ್ಟಾಚಾರ ಪ್ರಕರಣಗಳನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿರುವ ಪ್ರತಿಪಕ್ಷ ಬಿಜೆಪಿ, ಇದೀಗ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲೂ ವಾಗ್ದಾಳಿ ಮುಂದುವರಿಸಿದೆ.
ಹೌದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಸಿದ್ದರಾಮಯ್ಯ ಕುರಿತು ವ್ಯಂಗ್ಯವಾಡಿದ್ದು, ಒಲಂಪಿಕ್ಸ್ ಜತೆ ಹೋಲಿಸಿ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಚಿನ್ನದ ಪದಕ ದೊರೆಯಬಹುದು ಎಂದು ಲೇವಡಿ ಮಾಡಿದೆ.
ಒಲಂಪಿಕ್ಸ್ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದಲ್ಲಿ ಭ್ರಷ್ಟಾಚಾರದ ಪಿತಾಮಹನಿಗೆ ಚಿನ್ನದ ಪದಕ ಖಚಿತ-ನಿಶ್ಚಿತ-ಖಂಡಿತ ಎಂದು ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಫೋಟೊವನ್ನು ಬಿಜೆಪಿ ಪೋಸ್ಟ್ ಮಾಡಿದೆ. ಇದರಲ್ಲಿ ಸಿದ್ದರಾಮಯ್ಯ ಚಿನ್ನದ ಪದಕ, ನಾಗೇಂದ್ರ ಬೆಳ್ಳಿ ಹಾಗೂ ದದ್ದಲ್ ಕಂಚಿನ ಪದಕ ಧರಿಸಿರುವಂತೆ ಫೊಟೊ ಎಡಿಟ್ ಮಾಡಿ ಹಂಚಿಕೊಂಡಿದೆ..
https://twitter.com/BJP4Karnataka/status/1818161879312707842?t=m_-2yPaVBKMGINPBhik4mA&s=19