ಬೆಂಗಳೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯನವರು ಮುಂದಿನ ಐದು ವರ್ಷದವರೆಗೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು ಗ್ಯಾರಂಟಿ ಯೋಜನೆಗಳು ಕೂಡ ಐದು ವರ್ಷದ ಅವಧಿಗೆ ಇರುತ್ತವೆ ಎಂಬ ಹೇಳಿಕೆಗೆ ಕಾಂಗ್ರೆಸ್ ನಾಯಕರು ಇದೀಗ ತಮ್ಮ ಪ್ರತಿಕ್ರಿಯೆ ನೀಡಿದ್ದು ಎಲ್ಲರೂ ಅದು ಯತೀಂದ್ರ ಅವರ ವೈಯಕ್ತಿಕ ಹೇಳಿಕೆ ಎಂದು ತಿಳಿಸಿದ್ದಾರೆ.
MP ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ CM’ಆಗಿರುತ್ತಾರೆ ಎಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಸದ್ಯ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಕಾಂಗ್ರೆಸ್ನ ಅನೇಕ ನಾಯಕರು ಈ ಬಗ್ಗೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ
ಇದೀಗ ಮಾಜಿ ಶಾಸಕ ಯತೀಂದ್ರ ಹೇಳಿಕೆಗೆ ಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಸಿಎಂ ಮುಂದುವರಿಸುವುದು ಬಿಡುವುದು ನಮ್ಮ ಹೈಕಮಾಂಡ್ ನಿರ್ಧಾರ ಮಾಡ್ತಾರೆ. ಸಿಎಂ ಬಗ್ಗೆ ನಿರ್ಧಾರ ಮಾಡುವುದು ನಾವಲ್ಲ. ಲೋಕಸಭೆ ಚುನಾವಣೆಯಲ್ಲಿ ಕೇವಲ ಸಿಎಂ ಸಿದ್ದರಾಮಯ್ಯ ಮಾತ್ರವಲ್ಲ. ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಂಕಲ್ಪ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಹೈಕಮಾಂಡ್ ತೀರ್ಮಾನ : ಸವದಿ
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸವದಿ, ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದರು. ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ 5 ವರ್ಷವೂ ಅವರೇ ಸಿಎಂ ಆಗಬಹುದು. ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಅದು ಐದು ವರ್ಷವೋ ಎರಡು ವರ್ಷವೋ ಎಂಬುದನ್ನೂ ಹೈಕಮಾಂಡೇ ನಿರ್ಧರಿಸಲಿದೆ ಎಂದು ಸವದಿ ಹೇಳಿದರು.
ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವುದು ನಮ್ಮ ಗುರಿ
ಯತೀಂದ್ರ ಸಿಂದರಾಮಯ್ಯ ಯಾವ ಕಾರಣಕ್ಕೆ ಹೀಗೆ ಹೇಳಿದ್ದಾರೆ ಗೊತ್ತಿಲ್ಲ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದೇ ನಮ್ಮ ಗುರಿ ಡಾ ಯತಿಂದ್ರ ಹೇಳಿಕೆಗೆ ನಾನು ಯಾವುದೇ ರೀತಿಯಾದಂತಹ ಪ್ರತಿಕ್ರಿಯೆ ನೀಡುವುದಿಲ್ಲ.
ಕೇಂದ್ರ ಟಾರ್ಗೆಟ್ ಕೊಡುವ ಅವಶ್ಯಕತೆ ಇಲ್ಲ ಇದು ನಮ್ಮ ಜವಾಬ್ದಾರಿ.ಮತದಾರರು ಹೆಚ್ಚು ಸೀಟ್ಗಳನ್ನು ಗೆಲ್ಲಿಸಿ ಕೊಡುತ್ತಾರೆ ಎಂಬ ನಂಬಿಕೆ ಇದೆ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಉತ್ತರ ಹೈಕಮಾಂಡ್ ಕೊಡುತ್ತದೆ.ಈ ಬಗ್ಗೆ ನಾನು ಪ್ರತಿಕ್ರಿಯಿಸಿ ಇನ್ನೂ ಗೊಂದಲ ಮಾಡಿಕೊಳ್ಳುವುದಿಲ್ಲ ಎಂದು ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.