Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನಾಳೆಯ ‘CLP’ ಸಭೆಯಲ್ಲಿ ನೆಕ್ಸ್ಟ್ CM ಡಿಕೆ ಶಿವಕುಮಾರ್ ಹೆಸರು ಘೋಷಣೆ ಸಾಧ್ಯತೆ!

ಪಿಪ್ಪಲಾದ ಅವತಾರ |ಶನಿಯ ಅಹಂಕಾರವನ್ನು ಶಮನ ಮಾಡಿದ ಶಿವಾವತಾರ | Pippalada Avatar: The Form of Shiva Feared Even by Shani Dev

BREAKING : ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸರ್ಜನೆ | Karnataka state cabinet dissolved

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಾರತೀಯ ರಾಜಕಾರಣದ ಧೀಮಂತ ನಾಯಕ : ಸಿದ್ದರಾಮಯ್ಯ ರಾಜೀನಾಮೆ ಕೊಟ್ಟ ಬಳಿಕ ಡಿಕೆಶಿ ಮೊದಲ ಪೋಸ್ಟ್!
KARNATAKA

ಭಾರತೀಯ ರಾಜಕಾರಣದ ಧೀಮಂತ ನಾಯಕ : ಸಿದ್ದರಾಮಯ್ಯ ರಾಜೀನಾಮೆ ಕೊಟ್ಟ ಬಳಿಕ ಡಿಕೆಶಿ ಮೊದಲ ಪೋಸ್ಟ್!

By ಸುರೇಶ್‌

ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನೆಲ್ಲೆ, ಡಿಕೆ ಶಿವಕುಮಾರ್ ಮೊದಲ ಬಾರಿ ಪೋಸ್ಟ್ ಹಂಚಿಕೊಂಡಿದ್ದು , ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು

ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜಕಾರಣದ ಧೀಮಂತ ನಾಯಕ.

ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ. ಸುಮಾರು ಐವತ್ತು ವರ್ಷಗಳ ಅವರ ಅಗಾಧ ರಾಜಕೀಯ ಅನುಭವ, ಸಾಮಾಜಿಕ ಕಳಕಳಿ ಮತ್ತು ಜನಪರ ಯೋಜನೆಗಳು ಸದಾ ಸ್ಮರಣೀಯ. 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದಲೂ ಇಂದಿನವರೆಗೆ, ಸಿದ್ದರಾಮಯ್ಯನವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿ ನಿಂತಿದ್ದಾರೆ.

ಅವರ ಆಡಳಿತದಲ್ಲಿ ನಾನು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ. ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ನಮ್ಮ ಪಕ್ಷದ ಬಲವರ್ಧನೆಗೆ ಅವರ ಮಾರ್ಗದರ್ಶನ, ಹಿರಿಯ ಅನುಭವ ನಮಗೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ.ಕರ್ನಾಟಕದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯೋಣ ಎಂದು ತಿಳಿಸಿದ್ದಾರೆ.

ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು.

ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ… pic.twitter.com/DLEGN94UWt

— DK Shivakumar (@DKShivakumar) May 29, 2026

Share. Facebook Twitter LinkedIn WhatsApp Email

Related Posts

BIG NEWS : ನಾಳೆಯ ‘CLP’ ಸಭೆಯಲ್ಲಿ ನೆಕ್ಸ್ಟ್ CM ಡಿಕೆ ಶಿವಕುಮಾರ್ ಹೆಸರು ಘೋಷಣೆ ಸಾಧ್ಯತೆ!

1 Min Read

ಪಿಪ್ಪಲಾದ ಅವತಾರ |ಶನಿಯ ಅಹಂಕಾರವನ್ನು ಶಮನ ಮಾಡಿದ ಶಿವಾವತಾರ | Pippalada Avatar: The Form of Shiva Feared Even by Shani Dev

4 Mins Read

BREAKING : ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸರ್ಜನೆ | Karnataka state cabinet dissolved

1 Min Read
Recent News

BIG NEWS : ನಾಳೆಯ ‘CLP’ ಸಭೆಯಲ್ಲಿ ನೆಕ್ಸ್ಟ್ CM ಡಿಕೆ ಶಿವಕುಮಾರ್ ಹೆಸರು ಘೋಷಣೆ ಸಾಧ್ಯತೆ!

ಪಿಪ್ಪಲಾದ ಅವತಾರ |ಶನಿಯ ಅಹಂಕಾರವನ್ನು ಶಮನ ಮಾಡಿದ ಶಿವಾವತಾರ | Pippalada Avatar: The Form of Shiva Feared Even by Shani Dev

BREAKING : ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸರ್ಜನೆ | Karnataka state cabinet dissolved

ಭಾರತೀಯ ರಾಜಕಾರಣದ ಧೀಮಂತ ನಾಯಕ : ಸಿದ್ದರಾಮಯ್ಯ ರಾಜೀನಾಮೆ ಕೊಟ್ಟ ಬಳಿಕ ಡಿಕೆಶಿ ಮೊದಲ ಪೋಸ್ಟ್!

State News
KARNATAKA

BIG NEWS : ನಾಳೆಯ ‘CLP’ ಸಭೆಯಲ್ಲಿ ನೆಕ್ಸ್ಟ್ CM ಡಿಕೆ ಶಿವಕುಮಾರ್ ಹೆಸರು ಘೋಷಣೆ ಸಾಧ್ಯತೆ!

By ಸುರೇಶ್‌ KARNATAKA 1 Min Read

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವುದರಿಂದ, ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ. ಈ ಹಿನ್ನೆಲೆಯಲ್ಲಿ ನಾಳೆ…

ಪಿಪ್ಪಲಾದ ಅವತಾರ |ಶನಿಯ ಅಹಂಕಾರವನ್ನು ಶಮನ ಮಾಡಿದ ಶಿವಾವತಾರ | Pippalada Avatar: The Form of Shiva Feared Even by Shani Dev

BREAKING : ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸರ್ಜನೆ | Karnataka state cabinet dissolved

ಭಾರತೀಯ ರಾಜಕಾರಣದ ಧೀಮಂತ ನಾಯಕ : ಸಿದ್ದರಾಮಯ್ಯ ರಾಜೀನಾಮೆ ಕೊಟ್ಟ ಬಳಿಕ ಡಿಕೆಶಿ ಮೊದಲ ಪೋಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.