ಬೆಂಗಳೂರು: ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಸಿದ್ದರಾಮಯ್ಯ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ ಅಂತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಜೆಪಿ ಭವನದಲ್ಲಿ ಮಾತನಾಡಿದ ಅವರು, ಮುಡಾದಲ್ಲಿ 15 ಸೈಟ್ ಅಕ್ರಮವಾಗಿ ಪಡೆದ ಪ್ರಕರಣ ಒಂದು ಕಡೆಯಾದರೆ ಇದು ಇನ್ನೊಂದು ಅಕ್ರಮ. ಸಿದ್ದರಾಮಯ್ಯ ಡಿಸಿಎಂ ಆಗಿ ಮೈಸೂರಿನಲ್ಲಿ ಮನೆ ಕಟ್ಟಿದ್ದರು. ಯಾರ ಜಾಗದಲ್ಲಿ ಸಿದ್ದರಾಮಯ್ಯ ಅವರೇ ಮನೆ ಕಟ್ಟಿದ್ದೀರಿ? ಬೇಕಾ ದಾಖಲೆ ಎಂದು ಅವರು ಹೇಳಿದರು.
ಇದೇ ವೇಳೆ ಅವರು ಮಾತನಾಡುತ್ತ ದಲಿತನಿಗೆ ಹಂಚಿಕೆಯಾದ ಮುಡಾ ಸೈಟ್ನಲ್ಲಿ ಅಕ್ರಮವಾಗಿ ಸಿದ್ದರಾಮಯ್ಯ ಮನೆ ಕಟ್ಟಿದ್ದಾರೆ. ಮುಡಾ ಕೇಸ್ ಮಾತ್ರ ಅಲ್ಲ. ಮೈಸೂರಿನಲ್ಲಿ ಸೀರಿಸ್ ಆಫ್ ಅಕ್ರಮ ಕೇಸ್ ಸಿದ್ದರಾಮಯ್ಯರದ್ದು ಇದೆ ಅಂತ ಆರೋಪ ಮಾಡಿದರು.