ಮೈಸೂರು: ಮುಂಬರುವ ಚುನಾವಣೆಗೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಮತದಾರರನ್ನು ಸೆಳೆಯಲು ಮೂರು ಪಕ್ಷಗಳು ನಾನಾ ಕಸರತ್ತು ಮಾಡಿದೆ. ಇದೀಗ ಮುಂದಿನ ಚುನಾವಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಗೆ ಕೋಲಾರದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಮೈಸೂರಿಗೆ ಆಗಮಿಸಿ ಸಿದ್ದರಾಮಯ್ಯ ಬೆಂಬಲಿಗರಿಂದ ಒತ್ತಾಯ ಕೇಳಿಬಂದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಪಾರ್ಕ್ ನಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಬೆಂಬಲಿಗರು ಭೇಟಿ ಮಾಡಿದ್ದಾರೆ. ಮೈಸೂರಿನ ಆಂದೋಲನ ವೃತ್ತದ ಬಳಿ ಪಾರ್ಕ್ ನಲ್ಲಿ ಸಿದ್ದರಾಮಯ್ಯ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಸಿದ್ದರಾಮಯ್ಯ ಅವರನ್ನು ಕಾರ್ಯಕರ್ತರು ಭೇಟಿಯಾಗಿದ್ದಾರೆ.
ಕೋಲಾರದಿಂದ ಬಂದಿದ್ದ 30 ಕ್ಕೂ ಹೆಚ್ಚು ಕಾರ್ಯಕರ್ತರು ಆಗಮಿಸಿದ್ದರು. ಹೀಗಾಗಿ ಸಿದ್ದರಾಮಯ್ಯ ಭೇಟಿ ಮಾಡಿ ಮುಂದಿನ ಚುನಾವಣೆಗೆ ಕೋಲಾರದಿಂದ ಸ್ಪರ್ಧಿಸಲು ಒತ್ತಾಯ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಈ ಬಗ್ಗೆ ಒಂದಿನ ಕೋಲಾರಕ್ಕೆ ಬಂದು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.