ಬೆಂಗಳೂರು : ಬಿ.ಸಿ ನಾಗೇಶ್ ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ. ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಸಿದ್ದರಾಮಯ್ಯ ಕೊರೊನಾವನ್ನು ಸರಿಯಾಗಿ ನಿಯಂತ್ರಿಸಲಾಗದೆ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೊಬೈಲ್ ಹುಚ್ಚು ಹತ್ತಿಸಿರುವ ಬಿಜೆಪಿ ಸರ್ಕಾರ ಈಗ ಆ ಹುಚ್ಚು ಬಿಡಿಸಲು ಧ್ಯಾನ ನಡೆಸಲು ಮುಂದಾಗಿರುವುದು ಹುಚ್ಚುತನವಲ್ಲದೆ ಮತ್ತೇನು? ಎಂದು ಪ್ರಶ್ನಿಸಿದ್ದಾರೆ.
ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಬಿ.ಸಿ ನಾಗೇಶ್? ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್ಗಳನ್ನು ಮಾಡುತ್ತಿರುವುದು ಖಂಡನೀಯ. ರಾಜ್ಯದಲ್ಲಿ ಬಿ.ಸಿ ನಾಗೇಶ್ ಅವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದ ವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಕೊರೊನಾವನ್ನು ಸರಿಯಾಗಿ ನಿಯಂತ್ರಿಸಲಾಗದೆ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೊಬೈಲ್ ಹುಚ್ಚು ಹತ್ತಿಸಿರುವ @BJP4Karnataka ಸರ್ಕಾರ, ಈಗ ಆ ಹುಚ್ಚು ಬಿಡಿಸಲು ಧ್ಯಾನ ನಡೆಸಲು ಮುಂದಾಗಿರುವುದು ಹುಚ್ಚುತನವಲ್ಲದೆ ಮತ್ತೇನು?
3/5— Siddaramaiah (@siddaramaiah) November 3, 2022
ನಿನ್ನ ಸಾವಿಗೆ ನಾನೇ ಕಾರಣನಾದೇ: ಅಣ್ಣನ ಮಗನ ಶವ ನೋಡಿ ಕಣ್ಣೀರಿಟ್ಟ ಶಾಸಕ ರೇಣುಕಾಚಾರ್ಯ