ಬೆಂಗಳೂರು : ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ, ಸರ್ಕಾರ ಇದನ್ನು ಪುನಃ ಜಾರಿ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡದೇ ಹೋದ್ರೆ, ಮಕ್ಕಳು ಎಲ್ಲಿ ಹೋಗಬೇಕು, ಕೂಡಲೇ ಸರ್ಕಾರ ಸ್ಕಾಲರ್ ಶಿಪ್ ನೀಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು ವಿವಿ ಹೊರಡಿಸಿರುವ ಸುತ್ತೋಲೆ ವಾಪಸ್ ಪಡೆಯಲಿ. ಅಂಬೇಡ್ಕರ್ ಸಂವಿಧಾನ ನೀಡದಿದ್ರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ. ನರೇಂದ್ರ ಮೋದಿ ಇಂದು ಪ್ರಧಾನಮಂತ್ರಿ ಆಗುತ್ತಿರಲಿಲ್ಲ. ಹಾಗಾಗಿ ನಾವೆಲ್ಲ ಸಂವಿಧಾನ ರಕ್ಷಣೆಗೆ ಬದ್ಧರಾಗಿರಬೇಕು ಎಂದು ಸಿದ್ದರಾಮಯ್ಯ ಹೇಳಿದರು. ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ, ಸರ್ಕಾರ ಇದನ್ನು ಪುನಃ ಜಾರಿ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.