ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಶ್ರೀಗಳ ಅಗಲಿಕೆಗೆ ಲಕ್ಷಾಂತರ ಮಂದಿ ಭಕ್ತರು ಕಂಬನಿ ಮಿಡಿದಿದ್ದಾರೆ. ಸರಳತೆಯ ಸಂತ ಸಿದ್ದೇಶ್ವರ ಶ್ರೀ ಅಂತಿಮ ಯಾತ್ರೆಗೆ ಜನಸಾಗರವೇ ಹರಿದು ಬಂದಿದೆ.
ಸಿದ್ದೇಶ್ವರ ಶ್ರೀ ಅಗಲಿಕೆಯ ನಂತರ ಅವರ ಕುರಿತಾದ ಹಲವು ಅಚ್ಚರಿಯ ಮಾಹಿತಿಗಳು ಬಯಲಾಗುತ್ತಿದೆ. ಅವರ ಸರಳ ಸಜ್ಜನಿಕೆಯ ಸ್ವಭಾವ ನಿಜಕ್ಕೂ ನಮ್ಮನ್ನು ಬೆರಗಾಗಿಸುತ್ತದೆ. ಎಂದೂ ಕಾವಿ ತೊಡದ ಶ್ರೀಗಳು ಬಿಳಿ ಬಟ್ಟೆಯಲ್ಲೇ ಅತ್ಯಂತ ಸರಳವಾಗಿ ತಮ್ಮ ಜೀವನ ಕಳೆದಿದ್ದಾರೆ. ನಿಸ್ವಾರ್ಥ ಸೇವೆ, ಯಾರ ಹಂಗಿಗೂ ಒಳಗಾಗದೆ ಸರ್ವಜನರಿಂದಲೂ ಪ್ರೀತಿ, ವಿಶ್ವಾಸಗಳಿಸಿದ್ದ ಶ್ರೀಗಳು ಇಂದು ಇಹಲೋಕ ತ್ಯಜಿಸಿದ್ದಾರೆ.
ಶ್ರೀಗಳ ಸಮಾಜ ಸೇವೆಗೆ , ಅವರ ಕಾರ್ಯಕ್ಕೆ 2018ರಲ್ಲಿ ಭಾರತ ಸರಕಾರ ಸಿದ್ದೇಶ್ವರ ಶ್ರೀಗಳಿಗೆ ದೇಶದ ಪ್ರತಿಷ್ಠಿತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀಯನ್ನು ಘೋಷಿಸಿತ್ತು. ಆದರೆ ಅದನ್ನು ಅಷ್ಟೇ ನಯವಾಗಿ ಸಿದ್ದೇಶ್ವರ ಶ್ರೀಗಳು ನಿರಾಕರಿಸಿದ್ದರು. ಪ್ರಶಸ್ತಿಗೆ ನಾನು ಅರ್ಹನಲ್ಲ. ನನಗಿಂತ ಇನ್ನೂ ಹೆಚ್ಚಿನ ಸಾಧನೆ ಮಾಡಿದವರು ಬಹಳಷ್ಟು ಮಂದಿ ಇದ್ದಾರೆ, ಅವರಿಗೆ ಪ್ರಶಸ್ತಿ ಕೊಡಿ.. ನಮ್ಮ ಮೇಲಿನ ಪ್ರೀತಿ, ಗೌರವಕ್ಕೆ ಧನ್ಯವಾದಗಳು ಎಂದು ಪ್ರಧಾನಿಗೆ ಪತ್ರ ಬರೆದಿದ್ದರು.
ತಮ್ಮ ಮರಣದ ಬಗ್ಗೆ ಭವಿಷ್ಯ
ತಮ್ಮ ಮರಣದ ಬಗ್ಗೆ 2014ರಲ್ಲೇ ‘ಸಿದ್ದೇಶ್ವರ ಶ್ರೀ’ಗಳು ಭವಿಷ್ಯ ನುಡಿದಿದ್ದರು ಎಂಬುದಾಗಿ ತಿಳಿದು ಬಂದಿದೆ. ಎಂಟು ವರ್ಷದ ಹಿಂದೆಯೇ ಶ್ರೀಗಳು ತಮ್ಮ ಮರಣ ಯಾವ ರೀತಿ ಇರುತ್ತೆ ಎಂದು ಹೇಳಿದ್ದರಂತೆ.ತಮ್ಮ ಮರಣದ ಬಗ್ಗೆ 2014ರಲ್ಲೇ ‘ಸಿದ್ದೇಶ್ವರ ಶ್ರೀ’ಗಳು ಭವಿಷ್ಯ ನುಡಿದಿದ್ದರು ಎಂಬುದಾಗಿ ತಿಳಿದು ಬಂದಿದೆ. ಎಂಟು ವರ್ಷದ ಹಿಂದೆಯೇ ಶ್ರೀಗಳು ತಮ್ಮ ಮರಣ ಯಾವ ರೀತಿ ಇರುತ್ತೆ ಎಂದು ಹೇಳಿದ್ದರಂತೆ.
ವೈಕುಂಠ ಏಕಾದಶಿಯ ಪುಣ್ಯದಿನದಂದು (ಜ.2) ರಂದು ಶ್ರೀಗಳು ಲಿಂಗೈಕ್ಯರಾಗಿದ್ದು, ಇದು ದೇಹತ್ಯಾಗ ಎಂದು ಹೇಳಲಾಗಿದೆ. .ತಮ್ಮ ಮರಣದ ಬಗ್ಗೆ ತಾವೇ ಭವಿಷ್ಯ ನುಡಿದ್ದಿದ್ದ ಅವರು ಈ ಪುಣ್ಯದಿನದಂದು ತಮ್ಮ ದೇಹ ತ್ಯಾಗ ಮಾಡಿದ್ದಾರೆ ಎಂದು ಹಿರಿಯರು ಹೇಳಿದ್ದಾರೆ ಎನ್ನಲಾಗಿದೆ. ಮರಣದ ಬಗ್ಗೆ ತಿಳಿಸಿದ್ದ ಶ್ರೀಗಳು ನನ್ನನ್ನು ಹೂಳಬಾರದು, , ಸುಡಬೇಕು, ನನ್ನ ಕುರುಹುಗಳು ಇರಬಾರದು ಹಾಗೂ ಗುಡಿ ಕಟ್ಟಬಾರದು, ಸಮಾದಿ ಮಾಡಬಾರದು ಎಂದು ಭಕ್ತರಿಗೆ ಸೂಚನೆಗಳನ್ನು ನೀಡಿದ್ದರಂತೆ.
ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹ
ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂಬ ಕೂಗು ಕೇಳಿ ಬಂದಿದೆ. ಬಾಗಲಕೋಟೆ ಜಿಲ್ಲೆ ಇಳಕಲ್ ವಿಜಯಮಹಾಂತೇಶ್ ಮಠದ ಗುರುಮಹಾಂತ ಶ್ರೀಗಳು, ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು ಸಿದ್ದೇಶ್ವರ ಶ್ರೀಗಳು ನಾಡಿನ ಮಹಾನ್ ಸಂತರು. ನಡೆದಾಡುವ ದೇವರು. ಅವರಿಗೆ ಜಾತಿಭೇದ ಪಂತವಿಲ್ಲ. ಹಾಗಾಗಿ ಅವರಿಗೆ ಭಾರತ ಸರಕಾರ ಭಾರತರತ್ನ ನೀಡಬೇಕು. ಇದರಿಂದ ಪ್ರಶಸ್ತಿ ಪ್ರಶಸ್ತಿ ಗೌರವ ಹೆಚ್ಚಾಗುತ್ತದೆ. ಆದ್ದರಿಂದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕೆಂದು ಆಗ್ರಹಿಸಿದರು.
BIGG NEWS : ತಮ್ಮ ಮರಣದ ಬಗ್ಗೆ 8 ವರ್ಷದ ಹಿಂದೆಯೇ ಭವಿಷ್ಯ ನುಡಿದಿದ್ದ ‘ಸಿದ್ದೇಶ್ವರ ಶ್ರೀ’ |Siddeshwara Swamiji