ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಶ್ರೀಗಳ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿದೆ.
ತಮ್ಮ ಮರಣದ ಬಗ್ಗೆ 2014ರಲ್ಲೇ ‘ಸಿದ್ದೇಶ್ವರ ಶ್ರೀ’ಗಳು ಭವಿಷ್ಯ ನುಡಿದಿದ್ದರು ಎಂಬುದಾಗಿ ತಿಳಿದು ಬಂದಿದೆ. ಎಂಟು ವರ್ಷದ ಹಿಂದೆಯೇ ಶ್ರೀಗಳು ತಮ್ಮ ಮರಣ ಯಾವ ರೀತಿ ಇರುತ್ತೆ ಎಂದು ಹೇಳಿದ್ದರಂತೆ.
ವೈಕುಂಠ ಏಕಾದಶಿಯ ಪುಣ್ಯದಿನದಂದು (ಜ.2) ರಂದು ಶ್ರೀಗಳು ಲಿಂಗೈಕ್ಯರಾಗಿದ್ದು, ಇದು ದೇಹತ್ಯಾಗ ಎಂದು ಹೇಳಲಾಗಿದೆ. .ತಮ್ಮ ಮರಣದ ಬಗ್ಗೆ ತಾವೇ ಭವಿಷ್ಯ ನುಡಿದ್ದಿದ್ದ ಅವರು ಈ ಪುಣ್ಯದಿನದಂದು ತಮ್ಮ ದೇಹ ತ್ಯಾಗ ಮಾಡಿದ್ದಾರೆ ಎಂದು ಹಿರಿಯರು ಹೇಳಿದ್ದಾರೆ ಎನ್ನಲಾಗಿದೆ. ಮರಣದ ಬಗ್ಗೆ ತಿಳಿಸಿದ್ದ ಶ್ರೀಗಳು ನನ್ನನ್ನು ಹೂಳಬಾರದು, , ಸುಡಬೇಕು, ನನ್ನ ಕುರುಹುಗಳು ಇರಬಾರದು ಹಾಗೂ ಗುಡಿ ಕಟ್ಟಬಾರದು, ಸಮಾದಿ ಮಾಡಬಾರದು ಎಂದು ಭಕ್ತರಿಗೆ ಸೂಚನೆಗಳನ್ನು ನೀಡಿದ್ದರಂತೆ.
ಸಿದ್ದೇಶ್ವರ ಸ್ವಾಮೀಜಿ’ ಅಂತಿಮ ಯಾತ್ರೆಗೆ ಜನಸಾಗರ ವೇ ಹರಿದು ಬಂದಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಜನಸಾಗರ ಹರಿದು ಬಂದಿದ್ದು, ಎಲ್ಲೆಡೆ ಸಿದ್ದೇಶ್ವರ ಸ್ವಾಮೀಜಿಗೆ ಜೈ ಎಂಬ ಘೋಷಣೆ ಮೊಳಗಿದೆ.ಯಾತ್ರೆ ಸಾಗುವ ಮಾರ್ಗದಲ್ಲಿ ರಂಗೋಲಿ ಹಾಕಲಾಗಿದ್ದು. ವಾಹನಕ್ಕೆ ಹೂವಿನ ಸುರಿಮಳೆ ಸುರಿಸಲಾಗಿದೆ. ಅಂತಿಮ ಯಾತ್ರೆ ಜ್ಞಾನಯೋಗಾಶ್ರಮಕ್ಕೆ ತೆರಳುತ್ತಿದ್ದು, ಮೆರವಣಿಗೆಯಲ್ಲಿ ವಿವಿಧ ಮಠದ ಮಠಾಧೀಶರು, ರಾಜಕೀಯ ಗಣ್ಯರು ಭಾಗವಹಿಸಿದ್ದಾರೆ.
ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹ
ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂಬ ಕೂಗು ಕೇಳಿ ಬಂದಿದೆ. ಬಾಗಲಕೋಟೆ ಜಿಲ್ಲೆ ಇಳಕಲ್ ವಿಜಯಮಹಾಂತೇಶ್ ಮಠದ ಗುರುಮಹಾಂತ ಶ್ರೀಗಳು, ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರ ಮಾತನಾಡಿದ ಅವರು ಸಿದ್ದೇಶ್ವರ ಶ್ರೀಗಳು ನಾಡಿನ ಮಹಾನ್ ಸಂತರು. ನಡೆದಾಡುವ ದೇವರು. ಅವರಿಗೆ ಜಾತಿಭೇದ ಪಂತವಿಲ್ಲ. ಹಾಗಾಗಿ ಅವರಿಗೆ ಭಾರತ ಸರಕಾರ ಭಾರತರತ್ನ ನೀಡಬೇಕು. ಇದರಿಂದ ಪ್ರಶಸ್ತಿ ಪ್ರಶಸ್ತಿ ಗೌರವ ಹೆಚ್ಚಾಗುತ್ತದೆ. ಆದ್ದರಿಂದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕೆಂದು ಆಗ್ರಹಿಸಿದರು.
BIGG NEWS : ಗೋಧಿ & ಅಕ್ಕಿ ರಫ್ತು ಹೆಚ್ಚಳ ; ರೈತರಿಗೆ ಲಾಭ, ಸಾಮಾನ್ಯರಿಗೆ ಬೆಲೆ ಏರಿಕೆ ಸಂಕಷ್ಟ