BIG NEWS : ಜ್ಞಾನಯೋಗಾಶ್ರಮದ ʻಸಿದ್ಧೇಶ್ವರ ಸ್ವಾಮೀಜಿʼ ಲಿಂಗೈಕ್ಯ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ನವದೆಹಲಿ: ಪಾಂಡಿತ್ಯಪೂರ್ಣ ಪ್ರವಚನ ಮತ್ತು ಶಕ್ತಿಯುತ ವಾಗ್ಮಿಗಳಿಗೆ ಹೆಸರಾಗಿದ್ದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿಗಳು ವಿಜಯಪುರದಲ್ಲಿ ಸೋಮವಾರ ಲಿಂಗೈಕ್ಯರಾಗಿದ್ದಾರೆ. “ನಡೆದಾಡುವ ದೇವರು” ಎಂದು ಕರೆಯಲ್ಪಡುತ್ತಿದ್ದ ಸಿದ್ಧೇಶ್ವರ ಶ್ರೀಗಳು ಕೆಲವು ಸಮಯದಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿರಿಯ ನಾಯಕರು ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ ಅವರು ಟ್ವೀಟ್‌ ಮಾಡಿ, ʻಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮಿಗಳು ಸಮಾಜಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಸ್ಮರಣೀಯರು. ಅವರು ಇತರರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದರು ಮತ್ತು … Continue reading BIG NEWS : ಜ್ಞಾನಯೋಗಾಶ್ರಮದ ʻಸಿದ್ಧೇಶ್ವರ ಸ್ವಾಮೀಜಿʼ ಲಿಂಗೈಕ್ಯ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ