ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಗಲಿಕೆಗೆ ಗಣ್ಯರು ಮತ್ತು ಭಕ್ತರು ಸಂತಾಪ ಸೂಚಿಸಿದ್ದಾರೆ.
ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಲು ಪ್ಯ್ಲಾನ್ ಮಾಡಿಕೊಂಡಿದ್ದರು. ಆದರೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಹಿನ್ನೆಲೆಯಲ್ಲಿ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ರದ್ದುಗೊಳಿಸಿದ್ದಾರೆ. ಬೆಳಗ್ಗೆ 11.30ಕ್ಕೆ ವಿಜಯಪುರಕ್ಕೆ ಸಿಎಂ ತೆರಳಲಿದ್ದಾರೆ. ಹೆಚ್ ಎಎಲ್ ನಿಂದ ಹೆಲಿಕಾಪ್ಟರ್ ನಲ್ಲಿ ಸಿಎಂ ಬೊಮ್ಮಾಯಿ ತೆರಳಲಿದ್ದಾರೆ.
ಸಿದ್ದೇಶ್ವರ ಸ್ವಾಮೀಜಿ ಅಂತಿಮ ದರ್ಶನ ಪಡೆಯಲಿದ್ದಾರೆ. ಸಂಜೆ ನಡೆಯುವ ಅಂತ್ಯಕ್ರಿಯೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ.ಜ್ಞಾನಯೋಗಾಶ್ರಮದಲ್ಲಿ ಸೋಮವಾರ ಸಿದ್ಧೇಶ್ವರ ಶ್ರೀಗಳು ಲಿಂಗೈಕ್ಯರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿ ಶ್ರೀಗಳಿಗೆ ಗೌರವ ನಮನ ಸಲ್ಲಿಸಿದ್ದಾರೆ.
BIGG NEWS : ರೈತರೇ ಗಮನಿಸಿ : `ಪಿಎಂ ಕೃಷಿ ಸಿಂಚಾಯಿ ಯೋಜನೆ’ಯಡಿ ಹನಿ ನೀರಾವರಿ ಸಹಾಯಧನಕ್ಕೆ ಅರ್ಜಿ ಆಹ್ವಾನ|