ಮಂಡ್ಯ: ಕಾಂಗ್ರೆಸ್ ನವರು ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ, ಹಾಗಾದ್ರೆ ಅಮಿತ್ ಶಾ ಏನು ಮಾವನ ಮನೆಗೆ ಹೋಗಿ ಬಂದರಾ..? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಕಾಂಗ್ರೆಸ್ ನವರು ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ, ಹಾಗಾದ್ರೆ ಅಮಿತ್ ಶಾ ಏನು ಮಾವನ ಮನೆಗೆ ಹೋಗಿ ಬಂದರಾ..? ಬಿಜೆಪಿಯವರಿಗೆ ಸಮಾಜದಲ್ಲಿ ಗಲಭೆ ಎಬ್ಬಿಸಲು ರೌಡಿಗಳು ಬೇಕು. ಅದೇ ಕಾರಣಕ್ಕೆ ರೌಡಿ ಶೀಟರ್ಗಳನ್ನು ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು.
ಗೃಹ ಸಚಿವರು ಮೂರು ವರ್ಷಕ್ಕೂ ಹೆಚ್ಚು ಕಾಲ ಜೈಲಾಗಿತ್ತು. ಅಂಥವರೇ ಅಧ್ಯಕ್ಷರು ಹಾಗೂ ಗೃಹ ಸಚಿವರಾಗಿದ್ದಾರೆ ಎಂದರು. ನಲಪಾಡ್ ರೌಡಿ ಅಲ್ಲ,.ನಲಪಾಡ್ ಮೇಲೆ ಕ್ರಿಮಿನಲ್ ಕೇಸ್ ಇದೆ ಅಷ್ಟೇ. ಅಂತಾರೆ. ದೇಶದ ಗೃಹ ಸಚಿವರಾದ ಅಮಿತ್ ಶಾ ಏನು ಮಾನವ ಮನೆಗೆ ಹೋಗಿದ್ರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬಿಜೆಪಿಯ ಇಬ್ಬರು ಎಂಪಿಗಳು ಸೈಲೆಂಟ್ ಸುನೀಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವನು ಸರ್ಚ್ ವಾರೆಂಟ್ನಲ್ಲಿದ್ದಾನೆ. ಇಂಥವರ ಜತೆ ಓಡಾಡಿ ಸಮರ್ಥನೆ ಮಾಡಿಕೊಳ್ಳುತ್ತಾರೆ. ಬಿಜೆಪಿಯವರಿಗದು ಅಂಟುರೋಗ. ಅದರಲ್ಲೂ ಬಸವರಾಜ ಬೊಮ್ಮಾಯಿಗೆ ಜಾಸ್ತಿಯಾಗಿದೆ. ಏನೇ ಹೇಳಿದದೂ ಹಿಂದಿನ ಸರ್ಕಾರದಲ್ಲಿ ಆಗಿಲ್ವಾ ಅಂತಾರೆ. ನಿಮ್ಮ ತಪ್ಪುಗಳನ್ನು ಹೇಳಿ. ಜನ ನಿಮಗೆ ಅಧಿಕಾರ ಕೊಟ್ಟಿಲ್ಲ. ನೀವು ಅನೈತಿಕವಾಗಿ ಬಂದಿದ್ದೀರಾ ಎಂದು ಕಿಡಿಕಾರಿದರು.
BREAKING NEWS : ಶಾರೀಖ್ ಕುಕ್ಕರ್ ಹಿಡಿದು ನಿಂತ ಫೋಟೋಗೆ ಟ್ವಿಸ್ಟ್ : ಮಂಗಳೂರು ಸ್ಪೋಟಕ್ಕೆ ಮತ್ತೋರ್ವ ಸಾಥ್..?