ಬೆಂಗಳೂರು : ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇಂದು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಅವಳಿ ಮಕ್ಕಳು ಬಲಿಯಾದ ಘಟನೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿ ಆರೋಗ್ಯ ಸಚಿವ ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ.
ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಸುಧಾಕರ್ ಅವರೇ ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ , ಸುಧಾಕರ್ ಅವರೇ ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ ಎಂದಿದ್ದಾರೆ.
ಇನ್ನೊಂದು ಟ್ವೀಟ್ ನಲ್ಲಿ ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಕರ್ತವ್ಯಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ @BJP4Karnataka ದ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ ಎಂದಿದ್ದಾರೆ.
ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಕರ್ತವ್ಯಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ @BJP4Karnataka ದ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ. 3/4#ಸರ್ಕಾರಿಕೊಲೆಗಳು
— Siddaramaiah (@siddaramaiah) November 3, 2022
ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ @mla_sudhakar ಅವರೇ ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ. 2/4#ಸರ್ಕಾರಿಕೊಲೆಗಳು pic.twitter.com/tJFJM5wbdf
— Siddaramaiah (@siddaramaiah) November 3, 2022