ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರವೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ‘ನರೇಂದ್ರ ಮೋದಿ ಹವಾ ರಾಜ್ಯದಲ್ಲಿ ಏನೂ ಇಲ್ಲ, ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ, ಇನ್ನೂ ರಾಜ್ಯದಲ್ಲಿ ಏನಿದೆ ಎಂದು ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರವೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಗುಜರಾತ್ ವಿಧಾನಸಭೆ ಚುಣಾವಣೆಯ ಫಲಿತಾಂಶದ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಗುಜರಾತ್ ನಲ್ಲಿ ಕಾಂಗ್ರೆಸ್ ಸೋಲಿಸಲು ಆಮ್ ಆದ್ಮಿ ಪಾರ್ಟಿಗೆ ಬಿಜೆಪಿಯೇ ಫಂಡ್ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿಯೇ ಆಮ್ ಆದ್ಮಿ ಪಾರ್ಟಿಗೆ ಫಂಡ್ ಮಾಡಿದೆ. ಹೀಗಾಗಿ ಗುಜರಾತ್ ನಲ್ಲಿ ಮತ ವಿಭಜನೆಯಿಂದ ಬಿಜೆಪಿ ಮುನ್ನಡೆ ಸಾಧಿಸಿದೆ ಎಂದು ಹೇಳಿದ್ದಾರೆ.
ಗುಜರಾತ್ ಚುನಾವಣೆಯ ಫಲಿತಾಂಶ ಕರ್ನಾಟಕದ ಚುನಾವಣೆಯ ಮೇಲೆ ಪರಿಣಾಮ ಬೀರಲ್ಲ. ಅಲ್ಲಿನ ವಾತವರಣವೇ ಬೇರೆ ಇಲ್ಲಿನ ವಾತವಾರಣವೇ ಬೇರೆ. ಇಲ್ಲಿನ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿರೋಧ ಪಕ್ಷವೂ ತುಂಬಾ ಸ್ಟ್ರಾಂಗ್ ಆಗಿದೆ. ಹೀಗಾಗಿ ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.
ಪ. ಬಂಗಾಳ: ಮಾತನಾಡುತ್ತಾ ನಿಂತಿದ್ದ ಟಿಟಿಇ ತಲೆಗೆ ತಾಗಿದ ವಿದ್ಯುತ್ ತಂತಿ… ಮುಂದೇನಾಯ್ತು ನೋಡಿ | WATCH VIDEO