ಬೆಂಗಳೂರು : ರಾಹುಲ್ ಗಾಂಧಿಯವರನ್ನು (Rahul Gandhi) ಬಚ್ಚಾ ಎಂದು ಹೇಳುವ ಯಡಿಯೂರಪ್ಪನವರೇ ನಿಮ್ಮ ನರೇಂದ್ರ ಮೋದಿ) ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ನನ್ನ ಎರಡೇ ಎರಡು ಸವಾಲು. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಬಿಎಸ್ವೈ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ ಎಂದಿದ್ದಾರೆ.
ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ @BSYBJP ಅವರೇ, ನಿಮ್ಮ @narendramodi ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ. 5/7#ಬಡಾಯಿಬೊಮ್ಮಾಯಿ
— Siddaramaiah (@siddaramaiah) October 12, 2022
ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut in Bengaluru
ಸೆಕ್ಷನ್ 66ಎ ಅಡಿಯಲ್ಲಿ ಯಾವುದೇ ನಾಗರಿಕನ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್